ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ 15ಕ್ಕೆ

ಭೀಮಣ್ಣ ಶಖಾಪುರ
ಭೀಮಣ್ಣ ಶಖಾಪುರ
Published on

ಪ್ರಮುಖ ಮುಖ್ಯಾಂಶಗಳು

  • ಸಂಘಟನೆ ಸಂಚಾಲಕ ಶಖಾಪುರ ಎಚ್ಚರಿಕೆ
  • ಅನಧಿಕೃತ ಶಾಲೆ, ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಯಾದಗಿರಿ: ಅನಧಿಕೃತ ಶಾಲೆ, ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಜು.15ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸೇನೆ ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಖಾಪುರ ತಿಳಿಸಿದ್ದಾರೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಅನೇಕ ಸಲ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಮತ್ತು ಶಹಾಪುರದಲ್ಲಿ ರಸ್ತೆ ತಡೆ ನಂತರ ಕತ್ತೆಗಳ ಮೆರವಣಿಗೆ ಮಾಡಿ ಪ್ರತಿಭಟನೆ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದ ಶಿಕ್ಷಣ ಇಲಾಖೆ ವಿಳಂಬ ಕಾರ್ಯವಿಧಾನದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ. ಈಗಲಾದರೂ ತಕ್ಷಣ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷವಹಿಸಿದರೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಸೇನೆ ಜಿಲ್ಲಾಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯೆಕ್ಷ ಶ್ರೀದೇವಿ ಕಟ್ಟಿಮನಿ, ಅಂಬ್ರೇಷ್​ ದೋರನಳ್ಳಿ, ಅಬ್ದುಲ್​ ರಿಯಾಜ್​ ಸಾಹುಕಾರ, ಅಬ್ದುಲ್​ ಅಜೀಜ್​, ಚೆನ್ನಬಸವ ಕನಕ, ಮಹೇಶ, ಮಲ್ಲು ಕಲ್ಮನಿ, ರಾಜು ಗುಂಡಗುರ್ತಿ, ಭೀಮು ಮಳ್ಳಳ್ಳಿ, ಮರೆಪ್ಪ ಜಿನಿಕೇರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net