ಕೇಂದ್ರ ಸಚಿವ ಪ್ರಧಾನ ರಾಜೀನಾಮೆಗೆ ಆಗ್ರಹ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತತ್ವದಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾಂತೇಶ ಬಿಳ್ಳೂರ, ಹರ್ಷದಾ ಪಟೇಲ್, ಸಾಕ್ಷಿ ಪಾಟೀಲ, ನಂದಿನಿ ಸಾಳುಂಕೆ ಇತರರಿದ್ದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತತ್ವದಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾಂತೇಶ ಬಿಳ್ಳೂರ, ಹರ್ಷದಾ ಪಟೇಲ್, ಸಾಕ್ಷಿ ಪಾಟೀಲ, ನಂದಿನಿ ಸಾಳುಂಕೆ ಇತರರಿದ್ದರು.
Published on
ಬೆಳಗಾವಿ: ದೇಶಾದ್ಯಂತ ನೀಟ್ ಪರೀಕ್ಷೆಗೆ ಸಂಬಂಧಿಸಿ ಉಂಟಾಗಿರುವ ಅವ್ಯವಸ್ಥೆ, ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೇಶದ ಶಿಕ್ಷಣ ವ್ಯವಸ್ಥೆ ವೈಲ್ಯಕ್ಕೆ ನೀಟ್ ಪರೀಕ್ಷೆ ಅವಾಂತರ ಸ್ಪಷ್ಟ ಉದಾಹರಣೆಯಾಗಿದೆ. ನೀಟ್ ಪರೀಕ್ಷೆ ನಡೆಯುವ ಮುನ್ನ ಪ್ರಶ್ನೆಪತ್ರಿಕೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಸೋರಿಕೆಯಾಗಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎನ್‌ಟಿಎ ಯಾವುದೇ ಕ್ರಮ ಕೈಗೊಳ್ಳದೆ ಪರೀಕ್ಷೆ ನಡೆಸಿರುವುದು ಬೇಜವಾಬ್ದಾರಿ ನಡೆಯಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಪರೀಕ್ಷೆ ಸಿದ್ಧತೆ ನಡೆಸಿದ ಬಳಿಕ ಪರೀಕ್ಷೆ ರದ್ದುಪಡಿಸಿರುವುದು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತ ತಂದೊಡ್ಡಿದೆ.
ಎನ್‌ಟಿಎಗೆ ಪ್ರಮುಖ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ಸುರಕ್ಷಿತವಾಗಿ ನಡೆಸುವ ಸಾಮರ್ಥ್ಯ ಇಲ್ಲ ಎಂಬುದು ಸಾಬೀತಾಗಿದೆ. ಆದ್ದರಿಂದ ಎನ್‌ಟಿಎಯನ್ನು ತಕ್ಷಣ ರದ್ದುಪಡಿಸಬೇಕು. ಇವೆಲ್ಲದರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಹಾಂತೇಶ ಬಿಳ್ಳೂರ, ತಬುರಾ ನದ್ಾ, ಸಾ ಮನಿಯಾರ್, ಮೀನಾಜ್ ಮನಿಯಾರ್, ಹರ್ಷದಾ ಪಟೇಲ್, ಸಾಕ್ಷಿ ಪಾಟೀಲ, ನಂದಿನಿ ಸಾಳುಂಕೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net