ಬಸವಕಲ್ಯಾಣ: ಬೀದರ್ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಗುಂಡುರೆಡ್ಡಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರನ್ನು ಸನ್ಮಾನಿಸಿ, ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ರೈತರ ಸಂಕಷ್ಟ ನಿವಾರಣೆಗೆ ಕ್ರಮಕೈಗೊಳ್ಳಬೇಕು ಹಾಗೂ ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಬೇಕೆಂದು ಮನವಿ ಸಲ್ಲಿಸಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನ ಸೆಳೆದು ಅಗತ್ಯ ಕ್ರಮಕ್ಕೆ ಮುಂದಾಗುವಂತೆ ಸಚಿವರಲ್ಲಿ ಕೋರಿದರು. ರವೀಂದ್ರ, ಸಂದೀಪ್, ಜೈಪಾಲ್ ಇತರರಿದ್ದರು.