ರೈತರಿಗೆ ಸೂಕ್ತ ಪರಿಹಾರ ನೀಡಿ

ಬಸವನಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದ ರೈತ ಮತ್ತು ಅಧಿಕಾರಿಗಳ ಸಭೆ ನಡೆಯಿತು. ಬಸನಗೌಡ ಪಾಟೀಲ, ಶಂಕರಗೌಡ ರಾಯಗೊಂಡ  ಶಿವನಗೌಡ ಪಾಟೀಲ ಮತ್ತಿತರರಿದ್ದರು.
ಬಸವನಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದ ರೈತ ಮತ್ತು ಅಧಿಕಾರಿಗಳ ಸಭೆ ನಡೆಯಿತು. ಬಸನಗೌಡ ಪಾಟೀಲ, ಶಂಕರಗೌಡ ರಾಯಗೊಂಡ ಶಿವನಗೌಡ ಪಾಟೀಲ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಯಮನಪ್ಪ ಸೋಮನಕಟ್ಟಿ ಸೂಚನೆ
  • ಅಧಿಕಾರಿಗಳ ಸಭೆ
ಬಸವನಬಾಗೇವಾಡಿ : ರೈತ ದೇಶದ ಬೆನ್ನೆಲುಬು ಯಾವ ಒಬ್ಬ ರೈತನಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ನೀಡಬೇಕು ಎಂದು ತಹಸೀಲ್ದಾರ್ ಯಮನಪ್ಪ ಸೋಮನಕಟ್ಟಿ ಹೇಳಿದರು.
ತಾಲೂಕಿನ ಮುತ್ತಗಿ ಗ್ರಾಮದ ರೈತರು ತಮ್ಮ ಜಮೀನುಗಳಲ್ಲಿ ವಿದ್ಯುತ್ ಕಂಬ ಹಾಗೂ ತಂತಿ ಅಳವಡಿಸುವ ಕಾಮಗಾರಿ ಕೈಗೊಳ್ಳುವ ಮುನ್ನ ಬೆಳೆ ಹಾನಿಗೆ ಸೂಕ್ತ ಪರಿಹಾರ ಮೊತ್ತ ನಿಗದಿಪಡಿಸಿ ಕಾಮಗಾರಿ ಆರಂಭಿಸಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಹಿನ್ನೆಲೆ, ಮುತ್ತಗಿ ಗ್ರಾಮದಲ್ಲಿ ರೈತರು ಮತ್ತು ಅಧಿಕಾರಿಗಳು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ರೈತರ ಜಮೀನುಗಳಲ್ಲಿ ವಿದ್ಯುತ್ ಕಂಬ ಹಾಗೂ ತಂತಿ ಅಳವಡಿಸುವ ಕಾಮಗಾರಿ ಕೈಗೊಳ್ಳುವ ಮುನ್ನ ಬೆಳೆ ಹಾನಿಗೆ ಸೂಕ್ತ ಹಾಗೂ ನ್ಯಾಯಯುತ ಪರಿಹಾರ ಮೊತ್ತ ನಿಗದಿಪಡಿಸಿ ಕಾಮಗಾರಿ ಆರಂಭಿಸಬೇಕೆಂದು ಎಂದು ಗದಗ, ಕೊಪ್ಪಳ 765 ಕೆ.ವಿ. ವಿದ್ಯುತ್ ಮಾರ್ಗದ ಪವರ್‌ಗ್ರಿಡ್‌ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ, ಬೆಳೆ ಹಾನಿ ಸಮೀಕ್ಷೆ ಮಾಡಿ ಬೆಳೆಗಳಿಗೆ ತಕ್ಕಂತೆ ಸೂಕ್ತ ಪರಿಹಾರ ನಿಗದಿಪಡಿಸಿ, ರೈತರಿಂದ ಜಮೀನಿನ ದಾಖಲೆ ಪತ್ರಗಳನ್ನು ಪಡೆದುಕೊಂಡು ಯಾವ ಬೆಳೆಗಳಿಗೆ ಎಷ್ಟು ಪರಿಹಾರ ಬರುತ್ತದೆ ಎಂದು ರೈತರಿಗೆ ಲಿಖಿತ ರೂಪದಲ್ಲಿ ನೀಡಿದ ಬಳಿಕವೇ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.
ನ್ಯಾಯವಾದಿ ಬಸನಗೌಡ ಪಾಟೀಲ, ಶಂಕರಗೌಡ ರಾಯಗೊಂಡ ಶಿವನಗೌಡ ಪಾಟೀಲ, ಸುರೇಶಗೌಡ ರಾಯಗೊಂಡ, ಶಂಕರಗೌಡ ಪಾಟೀಲ, ವಿಜುಗೌಡ ಪಾಟೀಲ, ಮಲ್ಲನಗೌಡ ರಾಯಗೊಂಡ, ಶ್ರೀಮಂತಗೌಡ ಪಾಟೀಲ, ಭೀಮನಗೌಡ ಪಾಟೀಲ, ಚನ್ನಪ್ಪ ಸಿಡಿ ಸೇರಿ ಪವರ್‌ಗ್ರಿಡ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net