ಶಾಲಾ, ಕಾಲೇಜು ಅವಧಿಗೆ ಬಸ್​ ಸೌಲಭ್ಯ ಕಲ್ಪಿಸಿ

 ಬಾಗೇಪಲ್ಲಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿರುವ ಪರಗೋಡು ಗ್ರಾಮದ ಬಳಿ ಬಸ್​ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಅಧಿಕಾರಿಗಳೊಂದಿಗೆ ಮಾತನಾಡಿದರು.ಬಾಗೇಪಲ್ಲಿ ಟಕ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ, ಪೊಲೀಸ್​ ವೃತ್ತ ನೀರೀಕ್ಷಕ ಅಜಯ್​ ಸಾರಥಿ ಮತ್ತಿತರರು ಇದ್ದರು.
ಬಾಗೇಪಲ್ಲಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿರುವ ಪರಗೋಡು ಗ್ರಾಮದ ಬಳಿ ಬಸ್​ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಅಧಿಕಾರಿಗಳೊಂದಿಗೆ ಮಾತನಾಡಿದರು.ಬಾಗೇಪಲ್ಲಿ ಟಕ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ, ಪೊಲೀಸ್​ ವೃತ್ತ ನೀರೀಕ್ಷಕ ಅಜಯ್​ ಸಾರಥಿ ಮತ್ತಿತರರು ಇದ್ದರು.
Published on
ಬಾಗೇಪಲ್ಲಿ : ಪರಗೋಡು, ಬಾಗೇಪಲ್ಲಿ, ಚೆಂಡೂರು ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಶಾಲಾ ಕಾಲೇಜು ಸಮಯಕ್ಕೆ ಸರಿಯಾಗಿ ಸಾರಿಗೆ ಸಂಸ್ಥೆ ವತಿಯಿಂದ ಬಸ್​ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿರುವ ವಿದ್ಯಾರ್ಥಿಗಳು, ಪೊಲೀಸರ ಮತ್ತು ಸಾರಿಗೆ ಸಂಸ್ಥೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿರುವ ಪರಗೋಡು ಗ್ರಾಮದ ಬಳಿ ವಿವಿಧ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್​ಗಳನ್ನು ತಡೆದು ಶಾಲಾ, ಕಾಲೇಜು ಸಮಯಕ್ಕೆ ಸೂಕ್ತ ಬಸ್​ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಬಾಗೇಪಲ್ಲಿ ಡಿಪೋ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ ಅವರಿಗೆ ಮನವಿಸಲ್ಲಿಸಿದರು.
ಬಾಗೇಪಲ್ಲಿ, ಪರಗೋಡು, ಚೆಂಡೂರು, ಬೀಚಗಾನಹಳ್ಳಿ, ವರ್ಲಕೊಂಡ ವ್ಯಾಪ್ತಿಯಲ್ಲಿ ನೂರಾರು ಹಳ್ಳಿಗಳು ಇದ್ದು, ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಪ್ರಯಾಣಿಸಿ ಮನೆಗಳಿಗೆ ವಾಪಸ್ಸು ಬರಲು ಬೆಳಗ್ಗೆ 8 ರಿಂದ 9 ಗಂಟೆಯೊಳಗೆ ಹಾಗೂ ಸಾಯಂಕಾಲ 4 ರಿಂದ 6 ಗಂಟೆಗೆ ಸೂಕ್ತ ಬಸ್​ ವ್ಯವಸ್ಥೆ ಇಲ್ಲದಂತಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆ ಎದುರಾಗಿದೆ. ಬಸ್​ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನ ಇಲ್ಲದ ಕಾರಣ ವಿದ್ಯಾರ್ಥಿಗಳು ಪರಗೋಡು ಗ್ರಾಮದ ಬಳಿ ಹೆದ್ದಾರಿ ತಡೆ ನಡೆಸಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆ ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಪ್ರಕಾಶ್​ ಪ್ರತಿಕ್ರಿಯಿಸಿ, ಪೊಲೀಸ್​ ಇಲಾಖೆಗೆ ಮಾಹಿತಿ ನೀಡದೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದು ಅಪರಾಧ. ಇನ್ನೊಮ್ಮೆ ರಸ್ತೆ ತಡೆ ನಡೆಸಿದರೆ ವಿದ್ಯಾರ್ಥಿಗಳೆಂದು ನೋಡದೆ ಕೇಸು ದಾಖಲು ಮಾಡುವುದಾಗಿ ಸೂಚಿಸುತ್ತಿದ್ದಂತೆ ಸ್ಥಳದಲ್ಲಿ ಇದ್ದ ವಿದ್ಯಾರ್ಥಿಗಳು ಬಸ್​ ಸೌಲಭ್ಯ ಇಲ್ಲದೆ ನಿತ್ಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಿ ಸಾರ್​, ನಮ್ಮ ಸಮಸ್ಯೆ ಇಲಾಖೆಗೆ ಏಕೆ ಅರ್ಥ ಆಗುತ್ತಿಲ್ಲ ಎಂದು ಪೊಲೀಸರನ್ನು ಪ್ರಶ್ನಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net