ಪ್ರತಿ ಎಕರೆಗೆ ೫೦ ಸಾವಿರ ರೂ. ಪರಿಹಾರ ನೀಡಿ

ರೈತರ ವಿವಿಧ ಬೇಡಿಕೆ ಈಡೆರಿಸುವಂತೆ ಆಗ್ರಹಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಪದಾಽಕಾರಿಗಳು ಮತ್ತು ರೈತರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಽಕಾರಿಗೆ ಮನವಿ ಸಲ್ಲಿಸಿದರು. ಹನುಮಂತರಾಯ ದೊರೆ, ವಿಜಯಕುಮಾರ ಮಗ್ದಂಪುರ, ವಿಶ್ವನಾಥ ನಾಯಕ ಇತರರಿದ್ದರು.
ರೈತರ ವಿವಿಧ ಬೇಡಿಕೆ ಈಡೆರಿಸುವಂತೆ ಆಗ್ರಹಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಪದಾಽಕಾರಿಗಳು ಮತ್ತು ರೈತರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಽಕಾರಿಗೆ ಮನವಿ ಸಲ್ಲಿಸಿದರು. ಹನುಮಂತರಾಯ ದೊರೆ, ವಿಜಯಕುಮಾರ ಮಗ್ದಂಪುರ, ವಿಶ್ವನಾಥ ನಾಯಕ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಯ ಕರ್ನಾಟಕ ಸಂಘಟನೆ ಒತ್ತಾಯ
  • ಯಾದಗಿರಿ ಶಾಸಕರ ವಿರುದ್ಧ ಆಕ್ರೋಶ
ಯಾದಗಿರಿ : ಜಿ¯್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸಬೇಕು, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ೫೦ ಸಾವಿರ ಪರಿಹಾರ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಜಿ¯್ಲÁ ಘಟಕದಿಂದ ಸೋಮವಾರ ಜಿ¯್ಲÁಽಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ರೈತ ಮುಖಂಡ ಹನುಮಂತರಾಯ ದೊರೆ, ತುರ್ತಾಗಿ ಮೋಡ ಬಿತ್ತನೆ ಕೈಗೊಳ್ಳಬೇಕು ಮತ್ತು ರಾಷ್ಟಿçÃಕೃತ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿನ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಜಿ¯್ಲÉಯಾದ್ಯಂತ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹತ್ತಿ, ಶೇಂಗಾ, ಹೆಸರು, ಉದ್ದು, ತೊಗರಿ ಸೇರಿ ವಿವಿಧ ಬೆಳೆಗಳು ಒಣಗುತ್ತಿವೆ. ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆ ನಂಬಿ ರೈತರು ಬಿತ್ತನೆ ಮಾಡಿದ್ದರು. ನಂತರ ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗಿ ಹೋಗಿದ್ದು, ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆತಂಕವ್ಯಕ್ತಪಡಿಸಿದರು.
ಖಾಸಗಿ ಲೇವಾದೇವಿದಾರರಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಕೃಷಿ ಮಾಡಿದ ರೈತರು ಈಗ ಸಾಲದ ಸುಳಿಯಲ್ಲಿ ಸಿಲುಕಿz್ದÁರೆ. ಆದ್ದರಿಂದ ಸರ್ಕಾರ ಮಾನವೀಯ ನೆಲೆಯಲ್ಲಿ ಸ್ಪಂದಿಸಿ ರೈತರನ್ನು ರಕ್ಷಿಸಬೇಕು ಎಂದು ಹೇಳಿದರು.
ಸಂಘಟನೆ ಕಾರ್ಯದರ್ಶಿ ವಿಜಯಕುಮಾರ ಮಗ್ಗಂಪುರ, ರೈತರ ಸಮಸ್ಯೆಗಳ ಬಗ್ಗೆ ಶಾಸಕ ಚನ್ನಾರಡ್ಡಿ ಪಾಟೀಲï ಅವರು ಸಮರ್ಪಕ ಗಮನ ಹರಿಸುತ್ತಿಲ್ಲ. ಈಗಲಾದರೂ ಸರ್ಕಾರದ ಮೇಲೆ ಒತ್ತಡ ಹಾಕಿ ಜಿಲ್ಲೆ ಬರಪೀಡತ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಮಾತನಾಡಿದರು.
ಜಿ¯್ಲÁಽಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ದೀಪಕ್ ಪೊದ್ದಾರ, ಮಲ್ಲಿಕಾರ್ಜುನ ದೇವದುರ್ಗ, ಅರುಣ ಜಿಮ್, ಮಲ್ಲಿಕಾರ್ಜುನ , ಮಲ್ಲು ಮಸ್ಕನಳ್ಳಿ, ದೇವು ರಾಮಸಮುದ್ರ, ನವಾಜ್ ಖಾದ್ರಿ, ಭೀಮಣ್ಣ ಪುಜಾರಿ ಅಶೋಕ ಬಾಚವಾರ, ಶ್ರೀಕಾಂತ, ಅಂಬರೀಶ ನಾಯಕ ಇತರರಿದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net