ಚಿಟಗುಪ್ಪ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಿಂದ ಬೀದರ್ವರೆಗೆ ಮೃತ ಸಂಜೀವಕುಮಾರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿನಿಂದ ಪಾದಯಾತ್ರೆ
ಚಿಟಗುಪ್ಪ: ನಿಷೇಧಿತ ಮಾಂಜಾ ದಾರದಿಂದ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಸಂಜೀವಕುಮಾರ ಗುಂಡಪ್ಪ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಶನಿವಾರ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಿಂದ ಗುರುವಾರ ಬೀದರ್ವರೆಗೆ ಪಾದಯಾತ್ರೆ ನಡೆಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ ಗುತ್ತೇದಾರ್ ಮಾತನಾಡಿ, ಕಳೆದ ಜ.14ರಂದು ತಾಲೂಕಿನ ತಾಳಮಡಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಿತ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೀದರ್ ತಾಲೂಕಿನ ಬಂಬುಳಗಿ ಗ್ರಾಮದ ಸಂಜೀವಕುಮಾರ ಗುಂಡಪ್ಪ ದುರ್ಮರಣಕ್ಕೀಡಾಗಿದ್ದರು ಎಂದು ಹೇಳಿದರು.
ಘಟನೆಯ ಬಳಿಕ ಸಚಿವ ಈಶ್ವರ ಖಂಡ್ರೆ ಮೃತರ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕಲ್ಪಿಸುವ ಭರವಸೆ ನೀಡಿದ್ದರು. ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸಹ ಪರಿಹಾರ ಒದಗಿಸುವುದಾಗಿ ತಿಳಿಸಿದ್ದರು. ಆದರೆ ಹಲವು ತಿಂಗಳು ಕಳೆದರೂ ಭರವಸೆ ಈಡೇರಿಲ್ಲ ಎಂದು ಆರೋಪಿಸಿದರು.
ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.