ಸುರಪುರ ಶೈಕ್ಷಣಿಕ ಪ್ರಗತಿಗೆ ಅನುದಾನ ನೀಡಿ

ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಶೈಕ್ಷಣಿಕ ಅನುದಾನಕ್ಕೆ ಮನವಿ ಮಾಡಿದ
ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಶೈಕ್ಷಣಿಕ ಅನುದಾನಕ್ಕೆ ಮನವಿ ಮಾಡಿದ
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಶಿಕ್ಷಣ ಸಚಿವರಿಗೆ ಮನವಿ
ಸುರಪುರ: ಮತಕ್ಷೇತ್ರದ ಶೈಕ್ಷಣಿಕ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಗುರುವಾರ ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದರು.
ಈ ವೇಳೆ ಶಾಸಕ ಆರ್​ವಿಎನ್​ ಅವರು, ಕ್ಷೇತ್ರದ ಪಿಯು ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಅದರ ಜತೆಗೆ ಕ್ಷೇತ್ರದ ಕಿರಿಯ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ನೂತನ ಕಟ್ಟಡ ನಿರ್ಮಾಣದ ಅಗತ್ಯತೆ ಕುರಿತು ಸಚಿವರ ಗಮನ ಸೆಳೆದರು.
ಕ್ಷೇತ್ರದ ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಚಿವರೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಗಿದ್ದು, ಶಿಕ್ಷಣ ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಭೇಟಿ ಕ್ಷೇತ್ರದ ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆಗೆ ಹೊಸ ಭರವಸೆ ನೀಡಿದೆ ಎಂದು ಹೇಳಿದರು. ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್​ ಅಧ್ಯಕ್ಷ ವಿಠ್ಠಲ ಯಾದವ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net