ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ

ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ ಅಧಿಕಾರಿಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರ ಸಭೆ ನಡೆಯಿತು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಆನಂದ್ ವೈ. ಕಾಳೆ, ಬಿಸಿಎಂ ಜಿಲ್ಲಾಧಿಕಾರಿ ಶಶಿಕಲಾ, ಬಿಇಒ ಮೈಲೇಶ್ ಬೇವೂರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಜಗದೀಶ್ ದಿಗಡೂರು, ತಾಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ಮೆಹೂಬ್ ಬಾಷಾ, ತಾಲೂಕು ಬಿಸಿಎಂ ಅಧಿಕಾರಿ ಶ್ಯಾಮಪ್ಪ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಸೂಚನೆ
ಕೂಡ್ಲಿಗಿ: ಮುರಾರ್ಜಿ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಕ್ಷೇತ್ರದಲ್ಲಿ ಭಾರಿ ಬೇಡಿಕೆ ಇರುವುದರಿಂದ ವಸತಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಶನಿವಾರ ಹೇಳಿದರು. 
ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಹಿಂದುಳಿದ ತಾಲೂಕಿನಲ್ಲಿ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಸೂಕ್ತ ಶಿಕ್ಷಣ ದೊರೆಯಬೇಕಿದೆ. 
ಗ್ರಾಮೀಣ ಭಾಗದ ಬಡ ಮಕ್ಕಳಿಗೆ ವಸತಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ಹಾಗೂ ಉಚಿತ ವಸತಿ ಕಲ್ಪಿಸಬೇಕು. ಎಲ್ಲ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ ವಸತಿ ನಿಲಯಗಳಲ್ಲಿ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸ್ಟೆಲ್‌ಗಳಲ್ಲಿ ಶಿಸ್ತು ಕಾಪಾಡಬೇಕು. ಯಾವುದೇ ಅನೈತಿಕ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಊಟದ ಗುಣಮಟ್ಟದ ಬಗ್ಗೆ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net