ಕ್ರೀಡಾಪಟುಗಳಿಗೆ ಮೂಲಸೌಲಭ್ಯ ಒದಗಿಸಿ

ಸೇಡಂ ತಾಲೂಕು ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿದ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​ ಪರಿಶೀಲನೆ ನಡೆಸಿದರು. ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್​ ಶ್ರೀಯಾಂಕ ಧನಶ್ರೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಕೆಆರ್​ಐಡಿಎಲ್​ ಇಂಜಿನಿಯರ್​ ನೀಲಕಂಠ, ನಗರಸಭೆ ಪೌರಾಯುಕ್ತ ಶರಣಯ್ಯ ಸ್ವಾಮಿ ಇದ್ದರು.
ಸೇಡಂ ತಾಲೂಕು ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿದ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​ ಪರಿಶೀಲನೆ ನಡೆಸಿದರು. ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್​ ಶ್ರೀಯಾಂಕ ಧನಶ್ರೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಕೆಆರ್​ಐಡಿಎಲ್​ ಇಂಜಿನಿಯರ್​ ನೀಲಕಂಠ, ನಗರಸಭೆ ಪೌರಾಯುಕ್ತ ಶರಣಯ್ಯ ಸ್ವಾಮಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸೇಡಂ ಕ್ರೀಡಾಂಗಣ ಜಿಲ್ಲಾಧಿಕಾರಿ ಶರೀಫ್​ ಪರಿಶೀಲನೆ
 ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದಲ್ಲಿನ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣಗಳಿಗೆ ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​ ಮಂಗಳವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪರಿಶೀಲನೆ ವೇಳೆ ಕ್ರೀಡಾಂಗಣಗಳಲ್ಲಿನ ಮೂಲ ಸೌಕರ್ಯ ಕೊರತೆ, ನಿರ್ವಹಣೆ, ಕ್ರೀಡಾಪಟುಗಳಿಗೆ ಲಭ್ಯವಿರುವ ಸೌಲಭ್ಯ ಹಾಗೂ ಕ್ರೀಡಾ ಚಟುವಟಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕ್ರೀಡಾಪಟುಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ತ್ವರಿತವಾಗಿ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದರು.
ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಪಡೆಯುತ್ತಿರುವ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಅವರಿಗೆ ಎದುರಾಗುತ್ತಿರುವ ವಿದ್ಯುತ್​ ಲೈನ್​ ಸಮಸ್ಯೆ, ಶೌಚಗೃಹ ಸೇರಿ ಒಟ್ಟಾರೆಯಾಗಿ ಕ್ರೀಡಾಪಟುಗಳಿಗೆ  ಎದುರಾಗುತ್ತಿರುವ ಸಮಸ್ಯೆ ಹಾಗೂ ಅಗತ್ಯ ಬಗ್ಗೆ ಮಾಹಿತಿ ಪಡೆದು, ಶ್ರೀ ಪರಿಹಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಹೊರಾಂಗಣ ಕ್ರೀಡಾಂಗಣದಲ್ಲಿಯೂ ಸ್ವಚ್ಛತೆ, ಕುಡಿಯುವ ನೀರು, ಶೌಚಗೃಹ, ವಿದ್ಯುತ್​, ಮೈದಾನದ ನಿರ್ವಹಣೆ ಸೇರಿದಂತೆ ವಿವಿಧ ಸೌಲಭ್ಯ ಪರಿಶೀಲಿಸಿ, ಕ್ರೀಡಾಪಟುಗಳಿಗೆ ಉತ್ತಮ ವಾತಾವರಣ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದರು.
ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಕ್ರೀಡಾಂಗಣ ಅಭಿವೃದ್ಧಿಪಡಿಸುವಂತೆ ಸೂಚಿಸಿದರು.
ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್​ ಶ್ರೀಯಾಂಕ ಧನಶ್ರೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಕೆಆರ್​ಐಡಿಎಲ್​ ಇಂಜಿನಿಯರ್​ ನೀಲಕಂಠ, ನಗರಸಭೆ ಪೌರಾಯುಕ್ತ ಶರಣಯ್ಯ ಸ್ವಾಮಿ, ಕ್ರೀಡಾಂಗಣದ ಸಿಬ್ಬಂದಿ ಮಲ್ಲಿಕಾರ್ಜುನ್​, ಕಾಶಿನಾಥ ಗುಂಡಳ್ಳಿ ಇತರರಿದ್ದರು.
"

ಒಳಾಂಗಣ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಬ್ಯಾಡ್ಮಿಂಟನ್​ ತರಬೇತಿ ನೀಡಲು ಸರ್ಕಾರಕ್ಕೆ ಭರಿಸಬೇಕಾದ ವೆಚ್ಚ ಭರಿಸಿ ಮಕ್ಕಳಿಗೆ ಉತ್ತಮ ತರಬೇತಿ ನೀಡಬೇಕು. ತರಬೇತುದಾರರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು.

— ಇಕ್ರಮ್​ ಶರೀಫ್​, ಜಿಲ್ಲಾಧಿಕಾರಿ, ಕಲಬುರಗಿ.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net