ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉದ್ಯೋಗ ನೀಡಿ

ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿಬಿ-ಜಿರಾಮ ಜಿ ಯೋಜನೆಯ ಮಾಹಿತಿಯುಳ್ಳ ಕರಪತ್ರವನ್ನು ತಾಪಂ ಇಒ ಬಸವರಾಜ ಶರಭೈ ಬಿಡುಗಡೆ ಮಾಡಿ ಮಾತನಾಡಿದರು. ಲಕ್ಷ್ಮೀಭಾಯಿ ಪಾಟೀಲ್, ಗಿರೀಶ್ ಎಂ. ಇತರರಿದ್ದರು.
ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿಬಿ-ಜಿರಾಮ ಜಿ ಯೋಜನೆಯ ಮಾಹಿತಿಯುಳ್ಳ ಕರಪತ್ರವನ್ನು ತಾಪಂ ಇಒ ಬಸವರಾಜ ಶರಭೈ ಬಿಡುಗಡೆ ಮಾಡಿ ಮಾತನಾಡಿದರು. ಲಕ್ಷ್ಮೀಭಾಯಿ ಪಾಟೀಲ್, ಗಿರೀಶ್ ಎಂ. ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ಶರಭೈ ಸಲಹೆ
  • ಶಹಾಪುರದಲ್ಲಿ ವಿಬಿ-ಜಿರಾಮ ಜಿ ಕರಪತ್ರ ಬಿಡುಗಡೆ
ಶಹಾಪುರ :

ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಕುಂಠಿತಗೊAಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಮತ್ತು ಪಟ್ಟಣಗಳಿಗೆ ವಲಸೆ ಹೋಗದಂತೆ ತಮ್ಮೂರಿನಲ್ಲಿಯೇ ವಿಬಿ-ಜಿರಾಮ ಜಿ ಯೋಜನೆಯಡಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿ ಬಸವರಾಜ ಶರಭೈ ಹೇಳಿದರು.

ಚಟ್ನಳ್ಳಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಪಂ, ತಾಪಂ ಮತ್ತು ಗ್ರಾಪಂ ಹಾಗೂ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ ವಾರ್ಷಿಕ ಮಹಾಸಭೆಯಲ್ಲಿ ವಿಬಿ-ಜಿರಾಮ ಜಿ ಯೋಜನೆಯ ಮಾಹಿತಿಯುಳ್ಳ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈ ಯೋಜನೆಯಡಿ ನೊಂದಾಯಿತ ಎಲ್ಲ ಕಾರ್ಮಿಕರ ಗ್ಯಾರಂಟಿ ರೋಜಗಾರ ಕಾರ್ಡ್ಗಳಿಗೆ ಇ-ಕೆವೈಸಿ ಹಾಗೂ -ೆÃಸ್ ಅಥೆಂಟಿಕೇಶನ್ ಕಡ್ಡಾಯವಾಗಿ ಪೂರ್ಣಗೊಳಿಸಿ, ಉದ್ಯೋಗ ಬಯಸುವವರಿಗೆ ನಿರಂತರ ಕೆಲಸ ಒದಗಿಸಬೇಕು. ಈ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ಗ್ಯಾರಂಟಿ ರೋಜಗಾರ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ೫ ಲಕ್ಷ ರೂ.ವರೆಗೆ ಕೃಷಿ ಹೊಂಡ, ದನದ ಕೊಟ್ಟಿಗೆ, ಮೇಕೆ, ಹಂದಿ, ಕೋಳಿ ಶೆಡ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಸೇರಿ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಗ್ರಾಮೀಣ ಕುಟುಂಬಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಹೇಳಿದರು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ ೫೦೦ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವ ಗುರಿ ಇದ್ದು, ಉದ್ಯೋಗ ಬಯಸುವ ಯಾವುದೇ ಕುಟುಂಬವೂ ವಂಚಿತವಾಗದAತೆ ಕ್ರಮ ಕೈಗೊಳ್ಳಬೇಕು. ಮನೆ-ಮನೆಗೆ ತೆರಳಿ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ಉದ್ಯೋಗ ಬಯಸುವ ಕುಟುಂಬಗಳನ್ನು ಕಾಮಗಾರಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಪಿಡಿಒ ಲಕ್ಷ್ಮೀಭಾಯಿ ಪಾಟೀಲ್, ಜಿ¯್ಲÁ ಪಂಚಾಯಿತಿ ಎನ್‌ಆರ್‌ಎಲ್‌ಎಂ ಜಿ¯್ಲÁ ವ್ಯವಸ್ಥಾಪಕ ಗಿರೀಶ್ ಎಂ., ವಿಬಿ-ಜಿರಾಮ ಜಿ ಯೋಜನೆಯ ತಾಂತ್ರಿಕ ಸಹಾಯಕ ಆಶಿ-ï, ಐಇಸಿ ಸಂಯೋಜಕ ಬಸಪ್ಪ, ಶಹಾಪುರ ತಾಲೂಕು ಎನ್‌ಆರ್‌ಎಲ್‌ಎಂ ಸಿಬ್ಬಂದಿ ಸೇರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net