ಕೋಲಾರ: ಚುನಾವಣೆ ಆಯೋಗ ಹಮ್ಮಿಕೊಂಡಿರುವ ಮತದಾರರ ವಿಶೇಷ ಪರಿಷ್ಕರಣೆ ಹಾಗೂ ಗಣತಿ ಕಾರ್ಯದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ವಿವರ ನೋಂದಾಯಿಸಿಕೊಂಡು ಪ್ರಕ್ರಿಯೆಗೆ ಚಾಲನೆ ನೀಡಿದರು. information
ನಂತರ ಮಾತನಾಡಿದ ಅವರು, ಚುನಾವಣೆ ಆಯೋಗದ ಈ ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿದೆ. ಮುಳಬಾಗಿಲು ಮತ್ತು ಕೋಲಾರ ಕ್ಷೇತ್ರದ ಮತದಾರರು ಈ ವಿಶೇಷ ಪರಿಷ್ಕರಣಾ ಕಾರ್ಯದಲ್ಲಿ ಭಾಗವಹಿಸಬೇಕು. ಬೂತ್ಮಟ್ಟದ ಅಧಿಕಾರಿಗಳಿಗೆ ಅಗತ್ಯವಿರುವ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಭಾರತದ ಪೌರತ್ವ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ದೇಶದೊಳಗೆ ಅಕ್ರಮವಾಗಿ ನುಸುಳಿರುವ ಇತರ ದೇಶಗಳ ನುಸುಳುಕೋರರನ್ನು ಗುರುತಿಸಿ ಹೊರಗಟ್ಟಲು ಮತ್ತು ಅರ್ಹ ನಾಗರಿಕರಿಗೆ ಪೌರತ್ವದ ಹಕ್ಕು ಕಲ್ಪಿಸಲು ಈ ಕಾರ್ಯ ಉತ್ತಮ ಎಂದು ಅಭಿಪ್ರಾಯಪಟ್ಟರು.