ಪಿಯು ಕಾಲೇಜು ಪ್ರವೇಶ: ಪಾಲಕರಿಗೆ ಶಿಕ್ಷಣ ನೀಡಿದ ಎಚ್ಚರಿಕೆ ಏನು?, ಇದನ್ನು ತಿಳಿದರೆ ನಿಮಗೂ ಅನುಕೂಲ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)
Published on

ಪ್ರಮುಖ ಮುಖ್ಯಾಂಶಗಳು

  • ಕೆಲವು ಕಾಲೇಜುಗಳು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅವರಿಂದ ಅನುಮೋದನೆ ನೀಡಲಾದ ಸ್ಥಳಗಳನ್ನು ಹೊರತುಪಡಿಸಿ ಅನ್ಯ ಸ್ಥಳಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ.
  • ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳಿಗೆ ಅನುಮೋದಿತ ಪಿಯು ಕಾಲೇಜುಗಳಿಗೆ ಪ್ರವೇಶ ನೀಡಲಾಗಿದ್ದರೂ ವಾಸ್ತವವಾಗಿ ಪಾಠಗಳನ್ನು ಬೇರೆ ಮಾನ್ಯತೆ ಪಡೆದ ಖಾಸಗಿ ತರಬೇತಿ ಅಥವಾ ಕೋಚಿಂಗ್ ಸಂಸ್ಥೆಗಳಲ್ಲಿ ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ.
  • ಒಂದು ವೇಳೆ ಕಾಲೇಜುಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ, ಶೈಕ್ಷಣಿಕ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ.
  • ಅಂತಹ ಸಮಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಪಾಲಕರು ಎಚ್ಚರ ವಹಿಸುವಂತೆ ಸಲಹೆ ನೀಡಿದೆ.
ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗೆ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಲು ಇಚ್ಛಿಸುವ ಪಾಲಕರು ಕಾಲೇಜಿನ ವಿಳಾಸ, ಕೋರ್ಸ್ ಮತ್ತು ಮಾನ್ಯತೆ ನವೀಕರಣವನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಪಾಲಕರ ದೃಷ್ಟಿಯಿಂದ ರಾಜ್ಯದ ಎಲ್ಲ ಕಾಲೇಜುಗಳ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
ಕೆಲವು ಕಾಲೇಜುಗಳು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅವರಿಂದ ಅನುಮೋದನೆ ನೀಡಲಾದ ಸ್ಥಳಗಳನ್ನು ಹೊರತುಪಡಿಸಿ ಅನ್ಯ ಸ್ಥಳಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳಿಗೆ ಅನುಮೋದಿತ ಪಿಯು ಕಾಲೇಜುಗಳಿಗೆ ಪ್ರವೇಶ ನೀಡಲಾಗಿದ್ದರೂ ವಾಸ್ತವವಾಗಿ ಪಾಠಗಳನ್ನು ಬೇರೆ ಮಾನ್ಯತೆ ಪಡೆದ ಖಾಸಗಿ ತರಬೇತಿ ಅಥವಾ ಕೋಚಿಂಗ್ ಸಂಸ್ಥೆಗಳಲ್ಲಿ ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ.
ಒಂದು ವೇಳೆ ಕಾಲೇಜುಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ, ಶೈಕ್ಷಣಿಕ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ. ಅಂತಹ ಸಮಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಪಾಲಕರು ಎಚ್ಚರ ವಹಿಸುವಂತೆ ಸಲಹೆ ನೀಡಿದೆ.
ಮಕ್ಕಳ ಪ್ರವೇಶ ಸಮಯದಲ್ಲಿ ಪಾಳಕರು ಕಾಲೇಜುಗಳ ವಿಳಾಸ, ಮಂಜೂರಾದ ಕಾಂಬಿನೇಷನ್‌ಗಳು ಹಾಗೂ ಕಾಲೇಜಿಗೆ ಇರುವ ಪ್ರವೇಶ ಸಾಮರ್ಥ್ಯ (ಇನ್‌ಟೇಕ್) ಕುರಿತು ಮಾಹಿತಿ ಖಚಿತಪಡಿಸಿಕೊಲು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net