ಈ ಮೊದಲು ಪರೀಕ್ಷೆಯನ್ನು ಫೆ.22ರಂದು ನಡೆಸಲು ಅಧಿಸೂಚನೆ ಹೊರಡಿಸಲಾಗಿತ್ತು.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಫೆ.21ರಿಂದ 24ರವರೆಗೆ ನಡೆಸಲು ವೇಳಾಪಟ್ಟಿಯನ್ನು ಮರು ನಿಗದಿ
ಒಂದಕ್ಕಿಂತ ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಯಾವ ಅರ್ಜಿಯನ್ನು ಪರಿಗಣಿಸಬೇಕೆಂದು ವೆಬ್‌ಸೈಟ್‌ನಲ್ಲಿ ತಿಳಿಸಬೇಕು. ಇಲ್ಲವಾದಲ್ಲಿ ಇತ್ತೀಚಿನ ಅರ್ಜಿಯನ್ನು ಪರಿಗಣಿಸಲಾಗುತ್ತದೆ
ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕ ವೃಂದದಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆಯನ್ನು ಫೆ.21ರಿಂದ 24ರವರೆಗೆ ನಡೆಸಲು ವೇಳಾಪಟ್ಟಿಯನ್ನು ಮರು ನಿಗದಿ ಮಾಡಲಾಗಿದೆ.
ಈ ಮೊದಲು ಪರೀಕ್ಷೆಯನ್ನು ಫೆ.22ರಂದು ನಡೆಸಲು ಅಧಿಸೂಚನೆ ಹೊರಡಿಸಲಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಫೆ.21ರಂದು ಬೆಳಗ್ಗೆ 10ರಿಂದ 1 ಗಂಟೆಯವರೆಗೆ ಕನ್ನಡ, ಉರ್ದು, ಗಣಿತ, ಜೀವಶಾಸ, ಅದೇ ದಿನ ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಇಂಗ್ಲಿಷ್, ಸಂಸ್ಕೃತ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಫೆ.22ರಂದು ಬೆಳಗಿನ ಅವಧಿಯಲ್ಲಿ ಇತಿಹಾಸ, ಮಧ್ಯಾಹ್ನ ಹಿಂದಿ, ಫೆ.23ರಂದು ಬೆಳಗ್ಗೆ ಅರ್ಥಶಾಸ, ಮಧ್ಯಾಹ್ನ ರಾಜ್ಯಶಾಸ, ಫೆ.24ರಂದು ಬೆಳಗ್ಗೆ ಸಮಾಜಶಾಸ ಮತ್ತು ಮಧ್ಯಾಹ್ನ ಭೂಗೋಳಶಾಸ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಯನ್ನು ಆಯಾ ಶೈಕ್ಷಣಿ ವಿಭಾಗದ ಕೇಂದ್ರ ಸ್ಥಾಶದಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರವನ್ನು ಪರೀಕ್ಷಾ ಸಮಯಕ್ಕಿಂತ ಒಂದು ವಾರ ಮೊದಲೇ ಪ್ರಕಟಿಸಲಾಗುತ್ತದೆ. ತಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡ್ ಬಳಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಭಾಷಾ ವಿಷಯಗಳನ್ನು ಹೊರತುಪಡಿಸಿ ಉಳಿದ ವಿಷಯಗಳಲ್ಲಿ ಪ್ರಶ್ನೆಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿರುತ್ತವೆ.
ಒಂದಕ್ಕಿಂತ ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಯಾವ ಅರ್ಜಿಯನ್ನು ಪರಿಗಣಿಸಬೇಕೆಂದು ವೆಬ್‌ಸೈಟ್‌ನಲ್ಲಿ ತಿಳಿಸಬೇಕು. ಇಲ್ಲವಾದಲ್ಲಿ ಇತ್ತೀಚಿನ ಅರ್ಜಿಯನ್ನು ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.