ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಒ ಕೆ.ಎಂ.ಶೇಖರ್ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ&2026ರ ಅಂಗವಾಗಿ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೆ ಗಣತಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ. ಈ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.