ಪ್ರಜಾಸೇವಾ ಅಭಿಯಾನದಡಿ ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮೊದಲು ಮನೆ-ಮನೆಗೆ ಕರಪತ್ರಗಳನ್ನು ವಿತರಿಸಿ ಮಾಹಿತಿ ನೀಡಲಾಗುತ್ತದೆ. ಇದರಲ್ಲಿ ಪೂರ್ವಮುದ್ರಿತ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳ ಪರಿಶೀಲನಾ ಪಟ್ಟಿಯನ್ನು ಒಳಗೊಂಡಿರುತ್ತದೆ. ತಾಲೂಕು ಅಥವಾ ಹೋಬಳಿ ವ್ಯಾಪ್ತಿಯ ನಿವಾಸಿಗಳಿಗೆ ಸಭೆಯ ದಿನಾಂಕ, ಸಮಯ, ಸ್ಥಳ ಹಾಗೂ ಅಧ್ಯಕ್ಷತೆ ವಹಿಸುವ ಜನಪ್ರತಿನಿಧಿಯ ವಿವರಗಳನ್ನು ತಿಳಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕಾಲ್ ಸೆಂಟರ್ ಮೂಲಕ ಕರೆಗಳನ್ನು ಸ್ವೀಕರಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಅರ್ಜಿಗಳು ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಗ್ರಾಮ ಒನ್ ಮಳಿಗೆಗಳನ್ನು ಸ್ಥಾಪಿಸಿ, ಕಂಪೂಟರ್ ಲ್ಯಾಪ್‌ಟಾಪ್, ಪ್ರಿಂಟರ್, ಇಂಟರ್‌ನೆಟ್ ಸೌಲಭ್ಯಗಳ ಸಾರ್ವಜನಿಕರಿಗೆ ನೇರವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.