ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಪೋಲಿಯೋ ಹನಿ ವಿತರಣೆಗೆ ರಾಜ್ಯದಲ್ಲಿ 36,076 ಬೂತ್‌ಗಳನ್ನು ಗುರುತಿಸಲಾಗಿದೆ. ಗುಡ್ಡಗಾಡು ಪ್ರದೇಶಗಳನ್ನು ತಲುಪಲು 988 ಮೊಬೈಲ್ ತಂಡ ರಚಿಸಲಾಗಿದೆ. 2,125 ಟ್ರಾನ್ಸಿಟ್ ತಂಡವು ರೈಲು, ಬಸ್ ನಿಲ್ದಾಣ ಸೇರಿ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. ಕಾರ್ಯಕ್ರಮಕ್ಕೆ 1.14 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದ್ದು, 7,197 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.