ಮಕ್ಕಳನ್ನು ಕಾರ್ಮಿಕರನ್ನಾಗಿ ನೇಮಿಸಿಕೊಂಡರೆ ಶಿಕ್ಷೆ

ಕಲಬುರಗಿ ವಿ.ಜಿ.ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ ಚಾಲನೆ ನೀಡಿದರು. ಶರಣಪ್ಪ ಹೊಸಮನಿ, ಶಿವನಗೌಡ, ಡಾ.ಬಿ.ಆರ್​.ಕೊಂಡಾ, ವೀಣಾ ಹೊನಗುಂಟಿಕರ್​, ಮಂಜುಳಾ ಪಾಟೀಲ್​, ಮಹೇಶ ಮೇಣ್ಣನವರ್​, ವಿಶ್ವಾರಾಧ್ಯ ಇಜೇರಿ ಇತರರಿದ್ದರು.
ಕಲಬುರಗಿ ವಿ.ಜಿ.ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ ಚಾಲನೆ ನೀಡಿದರು. ಶರಣಪ್ಪ ಹೊಸಮನಿ, ಶಿವನಗೌಡ, ಡಾ.ಬಿ.ಆರ್​.ಕೊಂಡಾ, ವೀಣಾ ಹೊನಗುಂಟಿಕರ್​, ಮಂಜುಳಾ ಪಾಟೀಲ್​, ಮಹೇಶ ಮೇಣ್ಣನವರ್​, ವಿಶ್ವಾರಾಧ್ಯ ಇಜೇರಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿಕೆ
  • ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾಯ್ದೆ ಅರಿವು ಕಾರ್ಯಕ್ರಮ
ಕಲಬುರಗಿ: ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ 14 ವರ್ಷದೊಳಗಿನ ಮಕ್ಕಳನ್ನು ಕಾರ್ಮಿಕರನ್ನಾಗಿ ನೇಮಿಸಿಕೊಳ್ಳುವುದು ನಿಷೇಧ ಎಂದು ಹಿರಿಯ ಸಿವಿಲ್​ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ವೀರಮ್ಮ ಗಂಗಸಿರಿ ಮಹಿಳಾ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 15 ರಿಂದ 18 ವರ್ಷದ ಮಕ್ಕಳನ್ನು ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡಿಸಿಕೊಳ್ಳುವುದು ಶಿಾರ್ಹ ಅಪರಾಧ. ಒಂದು ವೇಳೆ ದುಡಿಸಿಕೊಂಡಲ್ಲಿ 50 ಸಾವಿರ ರೂ.ದಂಡ ಹಾಗೂ 2 ವರ್ಷ ಜೈಲು ಶಿೆ ವಿಧಿಸಲಾಗುತ್ತದೆ. ಪೋಷಕರು ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಕಂಡು ಬಂದಲ್ಲಿ ಅವರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವಾರಾಧ್ಯ ಇಜೇರಿ ಮಾತನಾಡಿ, ಬಾಲಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ತಕ್ಷಣ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗುತ್ತದೆ. 2025ರ ಕಾಯ್ದೆ ಪ್ರಕಾರ 18 ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ನಿಶ್ಚಿತಾರ್ಥ ಅಥವಾ ಮದುವೆ ಮಾಡಿದರೆ ಕುಟುಂಬಸ್ಥರು, ಮದುವೆಗೆ ಬಂದವರನ್ನು ಆರೋಪಿಯನ್ನಾಗಿ ಮಾಡಬಹುದು ಎಂದು ಹೇಳಿದರು.
ಜಿಲ್ಲಾ ಉಪವಿಭಾಗ ಕಾರ್ಮಿಕ ಅಧಿಕಾರಿ ಶರಣಪ್ಪ ಹೊಸಮನಿ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ತಡೆಯಲು 13 ಇಲಾಖೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಹಾಯಕ ಪೋಲಿಸ್​ ಆಯುಕ್ತ ಶಿವಣ್ಣಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್​ ಮಾತನಾಡಿದರು. ಹೆಚ್ಚುವರಿ ಎಸ್ಪಿ ಮಹೇಶ ಮೇಣ್ಣನವರ್​, ಸಹಾಯಕ ಕಾರ್ಮಿಕ ಆಯುಕ್ತ ಮೊಹಮ್ಮದ್​ ಬಷೀರ್​ ಅನ್ಸಾರಿ, ಕಾಲೇಜು ಪ್ರಾಂಶುಪಾಲ ಡಾ.ಬಿ.ಆರ್​.ಕೊಂಡಾ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಇತರರಿದ್ದರು.
"

ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿಮೂರ್ಲನೆ ಮಾಡಲು, ಅಂತಹ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಜಿಲ್ಲಾಡಳಿತ ಕಟಿಬದ್ಧವಾಗಿದೆ. ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಕಂಡುಬಂದಲ್ಲಿ ಅವರನ್ನು ಕೂಡಲೇ ರಸಿ, ಅಗತ್ಯ ಶಿಕ್ಷಣ ಕೊಡಿಸುವ ಜವಾಬ್ದಾರಿ ಇಲಾಖೆ ವಹಿಸಿಕೊಳ್ಳಲಿದೆ.

> ಮಂಜುಳಾ ಪಾಟೀಲ್​,

ಮಕ್ಕಳ ರಕ್ಷಣಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net