ನಿನ್ನೆ (ಜೂ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪದಗ್ರಹಣ ಕಾರ್ಯಕ್ರಮದಿಂದಾಗಿ ನಗರದಲ್ಲಿ ಭಾರಿ ಟ್ರಾಫಿಕ್ ದಟ್ಟಣೆ ಉಂಟಾಗಿ, ನೀಟ್ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾರಿ ಸಂಕಷ್ಟ ಅನುಭವಿಸಿದ್ದಾರೆ. ಕಾರ್ಯಕ್ರಮವನ್ನು ಎರಡರಿಂದ ಮೂರು ಗಂಟೆ ಮುಂದೂಡಿದ್ದರೆ ಈ ಸಮಸ್ಯೆಯನ್ನು ತಪ್ಪಿಸಬಹುದಿತ್ತು. ಆದರೆ, ಕಾಂಗ್ರೆಸ್ ನಾಯಕರಿಗೆ ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ರಾಜಕೀಯ ಪ್ರಚಾರವೇ ಮುಖ್ಯವಾಗಿತ್ತು ಎಂದರು.