ಕಳೆದ ಎರಡ್ಮೂರು ತಿಂಗಳುಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಜೋರಾಗಿದ್ದು, ಇತ್ತ ಅನೇಕ ಸಚಿವಾಕಾಂಕ್ಷಿಗಳು ಸಂಪುಟ ಸೇರಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಕಳೆದ ಬಾರಿ ದೆಹಲಿಗೆ ತೆರಳಿದ್ದ ಸಿಎಂ, ರಾಹುಲ್ ಭೇಟಿ ಮಾಡಲು ಇಚ್ಛಿಸಿದ್ದರು, ವರಿಷ್ಠರು ಬಿಹಾರ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರಿಂದ ಸಮಯ ಸಿಕ್ಕಿರಲಿಲ್ಲ ಎನ್ನಲಾಗಿದೆ.
ಇಂದು ಮುಖ್ಯಮಂತ್ರಿಗಳಿಗೆ, ರಾಹುಲ್ ಗಾಂಧಿ ಐದು ನಿಮಿಷ ಸಮಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಈ ವೇಳೆ ಸಿಎಂ ಪ್ರಮುಖವಾಗಿ ಸಂಪುಟ ಪುನಾರಚನೆಯ ಕುರಿತಾಗಿ ಮಾತನಾಡುವ ಸಾಧ್ಯತೆ ಇದೆ. ಇಂದು (ಶನಿವಾರ ನ 15) ರಾತ್ರಿ ಹಿರಿಯ ವಕೀಲರಾದ ಕಪಿಲ್ ಸಿಬಲ್ರ 'ದಿಲ್ ಸೆ ವಿತ್ ಕಪಿಲ್ ಸಿಬಲ್' ಪಾಡ್‌ಕ್ಯಾಸ್ಟ್‌ನ 100 ನೇ ಸಂಚಿಕೆಯಲ್ಲಿ ಸಿಎಂ ಭಾಗವಹಿಸಲಿದ್ದು. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಕೆಲವು ಸಚಿವರು ಉಪಸ್ಥಿತರಿರುವ ಸಾಧ್ಯತೆ ಇದೆ.