ರಾಹುಲ್ ಬಂಧನ ಪ್ರe್ಞÁಪ್ರಭುತ್ವದ ಕಗ್ಗೋಲೆ

ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಎಂ.ಬಿ.ಪಾಟೀಲï ಆರೋಪ
  • ರಾಹುಲï ಗಾಂಽ ಸೇರಿ ಹಲವರ ಬಂಧನ
ಯಾದಗಿರಿ : ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲï ಗಾಂಽ, ಸಂಸದೆ ಪ್ರಿಯಾಂಕಾ ಗಾಂಽ ಸೇರಿ ಕಾಂಗ್ರೆಸ್ ನಾಯಕರನ್ನು ದೆಹಲಿಯಲ್ಲಿ ಬಂಽಸಿರುವುದು ಇದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲï ಆರೋಪಿಸಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆನ ಬೆಳಗವಣಿಗೆ ನೋಡಿದರೆ ಸಂವಿಧಾನದ ಮೌಲ್ಯಗಳಿಗೆ ಗೌರವ ಇಲ್ಲದಂತಾಗಿದೆ. ರಾಜಕೀಯ ದ್ವೇಷದಿಂದ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವುದು ಸರಿಯಲ್ಲ ಎಂದರು. ನೀಟ್ ಪರೀಕ್ಷೆಯಲ್ಲಿನ ಅಕ್ರಮ ಕುರಿತು ಪ್ರತಿಕ್ರಿಯಿಸಿದ ಅವರು, ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಂಬAಧಪಟ್ಟ ಸಚಿವರನ್ನು ವಜÁಗೊಳಿಸಿ, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಬೇಕಿತ್ತು. ಆದರೆ ಸರ್ಕಾರ ಆ ದಿಸೆಯಲ್ಲಿ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಕರ್ನಾಟಕದ ಸಿಇಟಿ ಪರೀಕ್ಷಾ ವ್ಯವಸ್ಥೆಯನ್ನು ಉದಾಹರಣೆಯಾಗಿ ಉ¯್ಲÉÃಖಿಸಿದ ಅವರು, ತಂತ್ರe್ಞÁನ ಹಾಗೂ ಕೃತಕ ಬುದ್ಧಿಮತ್ತೆ (ಅಐ) ಬಳಸಿ ಪಾರದರ್ಶಕ ಮತ್ತು ಸುರಕ್ಷಿತ ಪರೀಕ್ಷಾ ವ್ಯವಸ್ಥೆ ರೂಪಿಸಬಹುದಾಗಿದೆ. ಆದರೆ ಕೇಂದ್ರ ಸರ್ಕಾರ ಅದಕ್ಕೆ ಆದ್ಯತೆ ನೀಡಿಲ್ಲ ಎಂದು ಟೀಕಿಸಿದರು. ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ, ಬೆಲೆ ಏರಿಕೆ ನಿಯಂತ್ರಣ ಹಾಗೂ ಆರ್ಥಿಕ ನೀತಿಗಳ ವಿಷಯದಲ್ಲಿ ವಿ-Àಲವಾಗಿದೆ. ನೋಟು ಅಮಾನ್ಯೀಕರಣದಿಂದ ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದರು. ಹಿಂದಿನ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅವಽಯಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಬಲಿಷ್ಠವಾಗಿತ್ತು. ಈಗಿನ ನೀತಿಗಳಿಂದ ಅದು ದುರ್ಬಲಗೊಂಡಿದೆ ಎಂದು ಪಾಟೀಲï ಆರೋಪಿಸಿದರು. ಶಾಸಕರಾದ ಶರಣಬಸಪ್ಪ ದರ್ಶನಾಪುರ, ಚನ್ನಾರಡ್ಡಿ ಪಾಟೀಲ್ ತುನ್ನೂರ, ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net