ಬಂಗಾರಪೇಟೆ: ಪ್ರಯಾಣಿಕರ ಸುರಕ್ಷತೆ ಖಾತ್ರಿಪಡಿಸುವ ಉದ್ದೇಶದಿಂದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಬಂಗಾರಪೇಟೆ ವೃತ್ತ ನಿರೀಕ್ಷಕ ರವಿಕುಮಾರ್, ರೈಲ್ವೆ ಪೊಲೀಸ್ ಹಾಗೂ ಪೊಲೀಸ್ ಸಿಬ್ಬಂದಿ ವಿವಿಧೆಡೆ ತಪಾಸಣೆ ಮತ್ತು ಭದ್ರತಾ ಪರಿಶೀಲನೆ ನಡೆಸಿದರು.
ರೈಲ್ವೆ ನಿಲ್ದಾಣದಲ್ಲಿ ನಿರೀಕ್ಷಣಾ ಕೊಠಡಿಗಳು, ್ಲಾಟ್ಫಾಮ್ರ್, ಪ್ರಯಾಣಿಕರ ವಸ್ತುಗಳ ಮೇಲೆ ನಿಗಾ ವಹಿಸಲಾಯಿತು. ವಿಶೇಷವಾಗಿ ಸ್ವರ್ಣ ಪ್ಯಾಸೆಂಜರ್ ರೈಲಿನಲ್ಲಿ ತಪಾಸಣೆ ನಡೆಸಿ, ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳ ಪರಿಶೀಲನೆ ಮಾಡಲಾಯಿತು.
ಪ್ರಯಾಣಿಕರಿಗೆ ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವಂತೆ, ಅಪರಿಚಿತ ವ್ಯಕ್ತಿಗಳಿಂದ ಯಾವುದೇ ವಸ್ತು&ಆಹಾರ ಸ್ವೀಕರಿಸದಂತೆ ಜಾಗೃತಿ ಮೂಡಿಸಲಾಯಿತು.
ಇನ್ಸ್ಪೆಕ್ಟರ್ ರವಿಕುಮಾರ್ ಮಾತನಾಡಿ, ರೈಲು ಪ್ರಯಾಣದ ವೇಳೆ ಸರಕುಗಳ ಕಳವು, ಅಹಿತಕರ ಘಟನೆಗಳು, ಕಾನೂನುಬಾಹಿರ ಚಟುವಟಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸಾರ್ವಜನಿಕರು ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಕಾರ್ಯಾಚರಣೆಯಿಂದ ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಮತ್ತಷ್ಟು ಬಲಗೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ತಪಾಸಣೆ, ಭದ್ರತಾ ಕ್ರಮಗಳು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.