ಸಂಜೆ ಸುರಿದ ಮಳೆಯಿಂದ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಬಸ್ ನಿಲ್ದಾಣ, ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣ ಮಳೆ ನೀರಿನಿಂದ ಆವೃತವಾಗಿತ್ತು. ಸೋಮವಾರವೂ ಈ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.