ರಾಜ್ಯದಲ್ಲಿ ವಾರಪೂರ್ತಿಮಳೆ: ದಕ್ಷಿಣ ಕರ್ನಾಟಕದಲ್ಲಿ ಬಿರುಸು- Thunderstorm Rain

 ರಾಜ್ಯದ ಹಲವೆಡೆ ವಾರಪೂರ್ತಿ ಬಿರುಗಾಳಿ ಸಹಿತ ಮಳೆ
ರಾಜ್ಯದ ಹಲವೆಡೆ ವಾರಪೂರ್ತಿ ಬಿರುಗಾಳಿ ಸಹಿತ ಮಳೆ
Published on
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ವಾರಪೂರ್ತಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ಜೂ 1ರಿಂದ ಜೂ 7ವರೆಗೆ ಬಿರುಗಾಳಿ ಸಹಿತ ವರ್ಷಧಾರೆಯಾಗಲಿದೆ. 
ಈ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಕೆಲ ಜಿಲ್ಲೆಗಳಲ್ಲಿ ಗಾಳಿ ಮತ್ತು ಮಿಂಚು ಜಾಸ್ತಿ ಕಾಣಿಸಿಕೊಳ್ಳುವ ಸಂಭವ ಇರುವುದರಿಂದ ಯೆಲ್ಲೊ ಅಲರ್ಟ್ ನೀಡಲಾಗಿದೆ. 
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮುಂದಿನ 5 ದಿನಗಳವರೆಗೆ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ.  ರಾಜ್ಯದಲ್ಲಿ ಮೇ 31ಕ್ಕೆ ಬೇಸಿಗೆಗಾಲ ಮುಕ್ತಾಯವಾಗಲಿದ್ದು, ಜೂ 1ರಿಂದ ಮಳೆಗಾಲ ಶುರುವಾಗಲಿದೆ. ವಾಡಿಕೆಯಂತೆ ಕರ್ನಾಟಕದ ಕರಾವಳಿ ಭಾಗಕ್ಕೆ ನೈಋತ್ಯ ಮಾನ್ಸೂನ್ (ಮುಂಗಾರು)ಆಗಮಿಸುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net