ರಾಜ್ಯದಲ್ಲಿ 4 ದಿನ ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮಾಹಿತಿ-Rain

ರಾಜ್ಯದಲ್ಲಿ ಮುಂದಿನ 4 ದಿನ ಬಿರುಗಾಳಿ ಸಹಿತ ಜೋರಾಗಿ ಮಳೆ
ರಾಜ್ಯದಲ್ಲಿ ಮುಂದಿನ 4 ದಿನ ಬಿರುಗಾಳಿ ಸಹಿತ ಜೋರಾಗಿ ಮಳೆ
Published on
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 4 ದಿನ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ಪ್ರಸ್ತುತ ಹವಾಮಾನವು ಇನ್ನಷ್ಟು ಮಾನ್ಸೂನ್ ಮುನ್ನಡೆಯಲು ಪೂರಕ ವಾತಾವರಣವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು ನಗರ ಸೇರಿ ದಕ್ಷಿಣ ಕರ್ನಾಟಕ ಮತ್ತು ಉ.ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸೋಮವಾರವೂ ವರ್ಷಧಾರೆಯಾಗಿತ್ತು.
ಬೆಂಗಳೂರು ನಗರ,ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ವಿಜಯನಗರ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಮುಂದಿನ 5 ದಿನ ವರ್ಷಧಾರೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 2 ದಿನ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಇಲಾಖೆ, ಯೆಲ್ಲೋ ಅಲರ್ಟ್ ಕೊಟ್ಟಿದೆ.
ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಮೇ 19ರಿಂದ ಮೇ 21ವರೆಗೆ ಗುಡುಗು, ಬಿರುಗಾಳಿ ಸಹಿತ ಸಾಧಾರಣ ವರ್ಷಧಾರೆಯಾಗಲಿದೆ. ಈ ಸಂದರ್ಭದಲ್ಲಿ ಕೆಲ ಪ್ರದೇಶಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಕ್ಕಿಂತ ಬಿರುಗಾಳಿ ಜಾಸ್ತಿ ಇರಲಿದೆ. ಹಾಗಾಗಿ, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net