ಈ ವೇಳೆ ಎಂಎಲ್ಸಿ ಆಗಿ ಮೊದಲ ಬಾರಿಗೆ ಜಿಲ್ಲಾ ಕಚೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಮಕನೂರ ಅವರನ್ನು ಶಾಸಕ ತುನ್ನೂರ ಪಕ್ಷದ ಪರವಾಗಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಶರಣಪ್ಪ ಮಾನೇಗಾರ, ಡಾ.ಶರಣಬಸಪ್ಪ ಕಾಮರೆಡ್ಡಿ, ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ಆಶಪ್ಪ ಮಾಸ್ಟರ್ ಗಾಜರಕೋಟ್, ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಮಹಿಳಾ ಪದಾಧಿಕಾರಿಗಳು ಭಾಗವಹಿಸಿದ್ದರು.