ಮಾದಕ ದ್ರವ್ಯದ ವಿರುದ್ಧ ಜಾಗೃತಿ ಮೂಡಿಸಿ

ಕೊಳ್ಳೇಗಾಲ ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಶಶಿಧರ್ ಚಾಲನೆ ನೀಡಿದರು. ಎನ್.ರವೀಂದ್ರ, ವರ್ಷಾ ಎಸ್.ದತ್ತೇಶ್ ಕುಮಾರ್ ಇತರರು ಇದ್ದರು.
ಕೊಳ್ಳೇಗಾಲ ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಶಶಿಧರ್ ಚಾಲನೆ ನೀಡಿದರು. ಎನ್.ರವೀಂದ್ರ, ವರ್ಷಾ ಎಸ್.ದತ್ತೇಶ್ ಕುಮಾರ್ ಇತರರು ಇದ್ದರು.
Published on
ಕೊಳ್ಳೇಗಾಲ : ಶಿಕ್ಷಣದಿಂದ ವಂಚಿತರಾದವರು ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಸಂಬಂಧಿಕರು ಹಾಗೂ ಸಾರ್ವಜನಿಕರಲ್ಲಿ ಮಾದಕ ದ್ರವ್ಯದ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಿಳಿಸಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಹೇಳಿದರು.

ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆ ಹಾಗೂ ಮಾನಸ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹನೂರು, ರಾಮಪುರ, ಮಲೆ ಮಹದೇಶ್ವರ ಬೆಟ್ಟದ ವಲಯಗಳಲ್ಲಿ ಬೆಳೆಯ ಜತೆ ಗಾಂಜಾ ಬೆಳೆಯಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗಿದೆ. ಶಾಲಾ, ಕಾಲೇಜು ಬಿಟ್ಟ ವಿದ್ಯಾರ್ಥಿಗಳ ಬಗ್ಗೆ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ. ವಸತಿ ನಿಲಯಗಳಲ್ಲಿಯೂ ಸಹ ಮಾದಕ ದ್ರವ್ಯ ಇರುತ್ತಿರುವ ಬಗ್ಗೆ ಗಮನ ಹರಿಸಲಾಗುತ್ತಿದೆ. ಪಾಲಕರ ಕನಸನ್ನು ವಿದ್ಯಾರ್ಥಿಗಳು ನನಸು ಮಾಡಬೇಕಾದರೆ ಮತ್ತು ಉತ್ತಮ ಭವಿಷ್ಯ ಪಡೆಯಬೇಕಾದರೆ ಮಾದಕ ವಸ್ತುಗಳಿಂದ ದೂರವಿರಬೇಕು ಮತ್ತು ಜಾಗೃತವಾಗಬೇಕು. ಬಲಿಷ್ಠ ಭಾರತವನ್ನು ಕಟ್ಟಲು ಮಾನವ ಶಕ್ತಿ ಬಹಳ ಮುಖ್ಯವಾಗಿದೆ. ನಶೆಮುಕ್ತ ಭಾರತವನ್ನು ನಿರ್ಮಾಣ ಮಾಡಲು ನಾವೆಲ್ಲರೂ ಕೈಜೋಡಿಸಬೇಕು. ಮಾದಕ ದ್ರವ್ಯ ನಮ್ಮನ್ನು ದೈಹಿಕವಾಗಿ, ಮಾನಸಿಕವಾಗಿ, ನೈತಿಕವಾಗಿ, ಬೌದ್ಧಿಕವಾಗಿ ಕುಗ್ಗಿಸುತ್ತಿದೆ. ಇದರ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದರು.

ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಎನ್.ರವೀಂದ್ರ, ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎಸ್.ದತ್ತೇಶ್‌ಕುಮಾರ್, ವಿಶೇಷ ಅಧಿಕಾರಿ ಎ.ಪಿ ದಿನೇಶ್ ಕುಮಾರ್. ಡಾ.ಆರ್.ನಾಗಭೂಷಣ್, ಪ್ರಾಂಶುಪಾಲ ಡಿ. ಕೃಷ್ಣೇಗೌಡ, ಎಂ.ಎಸ್. ಮನು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net