ಮೂಡಬಿದ್ರಿ ಸಮೀಪದಲ್ಲಿರುವ ಎಸ್ಕೆಎಫ್ ಎಲಿಕ್ಸರ್ ಸಂಸ್ಥೆಯ ಮುಖ್ಯಸ್ಥರಾಗಿ, ಉದ್ಯಮಿಯಾಗಿ ಸಾಕಷ್ಟು ಕೆಲಸ ಮಾಡಿರುವ ಡಾ. ರಾಮಕೃಷ್ಣ ಆಚಾರ್ ಇದೀಗ ಕೃಷಿಗೆ, ರೈತರಿಗೆ ಪ್ರೋತ್ಸಾಹ ನೀಡಲು ಮುಂದಾಗಿರುವುದು ಮಾದರಿ ನಡೆಯಾಗಿದೆ. ಮುಂದಿನ ಪೀಳಿಗೆ ಕೃಷಿಯತ್ತ ಆಕರ್ಷಿತರಾಗುವಂತೆ ಮಾಡುವ, ಮಣ್ಣಿನ ಸಂರಕ್ಷಣೆ ಮಾಡುವ, ಕೃಷಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಡಾ. ರಾಮಕೃಷ್ಣ ಆಚಾರ್ ಅವರ ನಿಲುವು ಅತ್ಯಂತ ಮಹತ್ವದ್ದಾಗಿದೆ.