ಸಿಎಂ ಆಗೋದು ನ್ಯಾಯವಾಗಿ ಹೊಸ ವರ್ಷದ ಒಳಗೇ ಆಗಬೇಕಿತ್ತು. ಆದರೆ ನಿಧಾನವಾಗುತ್ತಿತ್ತು. ಅದಕ್ಕಾಗಿಯೇ ನಾನು ವಿಶೇಷ ಪ್ರಾರ್ಥನೆ ಸಲ್ಲಿಸಲು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಹೋಗಿದ್ದೆ. ನಾನು ಶೃಂಗೇರಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಖುದ್ದು ಡಿ.ಕೆ. ಶಿವಕುಮಾರ್ ಕರೆ ಮಾಡಿ 'ಗುರೂಜಿ, ಕೆಲಸ ಆಗಿದೆ' ಎಂದು ತಿಳಿಸಿದರು. ಸೋಮವಾರದ ಒಳಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಗುರೂಜಿ ಹರ್ಷ ವ್ಯಕ್ತಪಡಿಸಿದರು.