ಲಿಟ್ ಫೆಸ್ಟ್ ಪ್ರಶಸ್ತಿಗೆ ರಾಜ್ಯಸಭಾ ಸದಸ್ಯೆ ಡಾ. ಮೀನಾಕ್ಷಿ ಜೈನ್ ಆಯ್ಕೆ
-Dr-Meenakshi-Jain
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
* ಲಿಟ್ ಫೆಸ್ಟ್ ಗೆ ಜ.10ರಂದು ಬೆಳಿಗ್ಗೆ ಚಾಲನೆ
* ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಉತ್ಸವ
ಬೆಂಗಳೂರು: ಮಂಗಳೂರು ಲಿಟ್ ಫೆಸ್ಟ್ 2026ನೇ ಸಾಲಿನ ಪ್ರಶಸ್ತಿಗೆ ಇತಿಹಾಸಕಾರ್ತಿ, ರಾಜ್ಯಸಭಾ ಸದಸ್ಯೆ ಡಾ. ಮೀನಾಕ್ಷಿ ಜೈನ್ ಆಯ್ಕೆಯಾಗಿದ್ದಾರೆ.
ಕಡಲ ತೀರದ ಮಂಗಳೂರಿನ ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜ. 10 ಮತ್ತು 11ರಂದು ನಡೆಯಲಿರುವ 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕ ಸಂಸ್ಥೆ ಭಾರತ್ ೌಂಡೇಷನ್ ತಿಳಿಸಿದೆ.
ಭಾರತದ ಪರಿಕಲ್ಪನೆಯನ್ನು ಸಾರುವ ಮಂಗಳೂರು ಲಿಟ್ ಫೆಸ್ಟ್ ಜ.10ರಂದು ಬೆಳಿಗ್ಗೆ ಚಾಲನೆ ಪಡೆಯಲಿದ್ದು, ಶತಾವಧಾನಿ ಡಾ. ಆರ್. ಗಣೇಶ್, ಮೀನಾಕ್ಷಿ ಜೈನ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಎಸ್. ರವಿ. (ಮಿಥಿಕ್ ಸೊಸೈಟಿ), ಡಾ. ಅಜಕ್ಕಳ ಗಿರೀಶ್ ಭಟ್ ಮೊದಲಾದವರು ಭಾಗವಹಿಸಲಿದ್ದಾರೆ.
ಉತ್ಸವದಲ್ಲಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೀನಾಕ್ಷಿ ಜೈನ್ ಅವರೊಂದಿಗೆ ವಿಶೇಷ ಸಂವಾದ ನಡೆಯಲಿದೆ. ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ‘ರಾ’ದ ಮಾಜಿ ಮುಖ್ಯಸ್ಥ ವಿಕ್ರಂ ಸೂದ್, ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಮಹಿಳಾ ಖಾಯಂ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ರಾಯಬಾರಿ ರುಚಿರಾ ಕಾಂಬೋಜ್, ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ರಾಯಬಾರಿ ಟಿ.ಎಸ್. ತಿರುಮೂರ್ತಿ ಸೇರಿ 65ಕ್ಕೂ ಹೆಚ್ಚು ಚಿಂತಕರು ಪಾಲ್ಗೊಳ್ಳಲಿದ್ದಾರೆ.