ಸಂಶೋಧನೆ, ಪಠ್ಯಕ್ರಮ, ಬೋಧಕ ಸಿಬ್ಬಂದಿ ಮತ್ತು ತರಬೇತಿ ವಿಚಾರದಲ್ಲಿ ಜ್ಞಾನ ವಿನಿಯಮವಾಗಲಿದೆ. ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ (ಸ್ಟೆಮ್) ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಮುಖ ಮೂರು ಕೋರ್ಸ್‌ಗಳನ್ನು ಈ ವರ್ಷ ಆರಂಭಿಸಲಾಗುತ್ತಿದೆ. ಕಂಪ್ಯೂಟರ್ ಸೈನ್ಸ್ ಆೃಂಡ್ ಇಂಜಿನಿಯರಿಂಗ್, ಏರೋಸ್ಪೇಸ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಇದೇ ಜೂ.4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಗಳಾದ ಜೆಇಇ ಮತ್ತು ಕಾಮೆಡ್-ಕೆನಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈ ಕೋರ್ಸ್ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ ಎಂದು ಮಾಹಿತಿ ನೀಡಿದರು.