ರಾಮನಗರದ ಕಾಂಗ್ರೆಸ್​ ಶಾಸಕ ಇಕ್ಬಾಲ್​ ಹುಸೇನ್​ಗೆ ಹೃದಯಾಘಾತ: ಬೆಂಗಳೂರಿನ ಆಸ್ಪತ್ರೆಗೆ ದಾಖಲು! H A Iqbal Hussain

ರಾಮನಗರದ ಕಾಂಗ್ರೆಸ್​ ಶಾಸಕ ಇಕ್ಬಾಲ್​ ಹುಸೇನ್​ಗೆ ಹೃದಯಾಘಾತ: ಬೆಂಗಳೂರಿನ ಆಸ್ಪತ್ರೆಗೆ ದಾಖಲು! H A Iqbal Hussain
ರಾಮನಗರದ ಕಾಂಗ್ರೆಸ್​ ಶಾಸಕ ಇಕ್ಬಾಲ್​ ಹುಸೇನ್​ಗೆ ಹೃದಯಾಘಾತ: ಬೆಂಗಳೂರಿನ ಆಸ್ಪತ್ರೆಗೆ ದಾಖಲು! H A Iqbal Hussain
Published on

ಪ್ರಮುಖ ಮುಖ್ಯಾಂಶಗಳು

  • ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್​ಗೆ ಹೃದಯಾಘಾತ
  • ಕೂಡಲೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿರುವ ಕುಟುಂಬಸ್ಥರು
  • ಬೆಂಬಲಿಗರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಆಸ್ಪತ್ರೆಯತ್ತ ದೌಡು
H A Iqbal Hussain : ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಕುಟುಂಬಸ್ಥರು ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ವೈದ್ಯರ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಶಾಸಕರಿಗೆ ಹೃದಯಾಘಾತವಾದ ಸುದ್ದಿ ತಿಳಿಯುತ್ತಿದ್ದಂತೆ ರಾಮನಗರ ಮತ್ತು ಬೆಂಗಳೂರಿನ ಅವರ ನೂರಾರು ಬೆಂಬಲಿಗರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದು, ಆಪ್ತ ವಲಯದಲ್ಲಿ ತೀವ್ರ ಆತಂಕ ಮನೆಮಾಡಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆಸ್ಪತ್ರೆಯ ಸುಗಮ ಕಾರ್ಯನಿರ್ವಹಣೆಗೆ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಪ್ರಮುಖ ರಾಜಕೀಯ ನಾಯಕರು ಹಾಗೂ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಿಸಲಿದ್ದಾರೆ. ಇಕ್ಬಾಲ್ ಹುಸೇನ್ ಅವರ ಆರೋಗ್ಯದ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರ ಕುಟುಂಬಸ್ಥರು ಹಾಗೂ ಆಪ್ತರು ಬೆಂಬಲಿಗರಿಗೆ ಹೇಳಿದ್ದಾರೆ. ಶಾಸಕರು ಶೀಘ್ರ ಗುಣಮುಖರಾಗಲಿ ಎಂದು ಕ್ಷೇತ್ರದಾದ್ಯಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net