ರಾಮಾಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿ / TUBAGERE

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಮೇಳೆಕೋಟೆ ಗ್ರಾಮದಲ್ಲಿ ಶ್ರೀ ರಾಮಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಮೇಳೆಕೋಟೆ ಗ್ರಾಮದಲ್ಲಿ ಶ್ರೀ ರಾಮಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
Published on
ತೂಬಗೆರೆ : ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಮೇಳೆಕೋಟೆ ಗ್ರಾಮದಲ್ಲಿ ಶನಿವಾರ ಶ್ರೀ ರಾಮಾಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಬೆಳಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ಆರಂಭವಾಗಿದ್ದು, ಸಾವಿರಾರು ಭಕ್ತರು ಭಾಗವಹಿಸಿದ್ದರು. ಧ್ವಜಾರೋಹಣ, ಅಲಂಕಾರ ಸೇವೆ, ಪ್ರಾಕಾರೋತ್ಸವ, ಹನುಮಂತೋತ್ಸವ, ಮಹಾಭಿಷೇಕ, ಪಲ್ಲಕ್ಕಿ ಉತ್ಸವ, ಗರುಡೋತ್ಸವ, ಶಯನೋತ್ಸವ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಹಾಗೂ ಇತರ ಪ್ರಸಾದಗಳನ್ನು ಸಮರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ಬ್ರಹ್ಮರಥೋತ್ಸವ ಅಂಗವಾಗಿ ಅನೇಕ ಅಂಗಡಿಗಳು ನೆಲೆಯಾಗಿದ್ದು, ಬತ್ತಾಸು, ಬುರುಗು, ಕಡ್ಲೇಬಿಜ ಮುಂತಾದ ತಿನಿಸುಗಳು ಜನರ ಮೆಚ್ಚುಗೆಗೆ ಪಾತ್ರವಾದವು.
ಕಾಂಗ್ರೆಸ್​ ಮುಖಂಡ ಎಸ್​.ಆರ್​.ಮುನಿರಾಜು, ತೂಬಗೆರೆ ಕಾಂಗ್ರೆಸ್​ ಪ್ರಚಾರ ಸಮಿತಿ ಅಧ್ಯಕ್ಷ ಅಂಜಿನಪ್ಪ, ಗ್ರಾಮಾಂತರ ಜಿಲ್ಲೆಯ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್​, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net