ಕಾಸಿಯಾ ಜಿಲ್ಲಾ ಅಧ್ಯಕ್ಷರಾಗಿ ರಂಗಸ್ವಾಮಿ ನೇಮಕ

ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ (ಕಾಸಿಯಾ) ಎಂ.ಆರ್.ರಂಗಸ್ವಾಮಿ ಹಾಸನ ಜಿಲ್ಲಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ
ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ (ಕಾಸಿಯಾ) ಎಂ.ಆರ್.ರಂಗಸ್ವಾಮಿ ಹಾಸನ ಜಿಲ್ಲಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ
Published on

ಪ್ರಮುಖ ಮುಖ್ಯಾಂಶಗಳು

  • ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಎಂ.ಆರ್.ರಂಗಸ್ವಾಮಿ
  • ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ (ಕಾಸಿಯಾ) ಹಾಸನ ಜಿಲ್ಲಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ
ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಎಂ.ಆರ್.ರಂಗಸ್ವಾಮಿ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ (ಕಾಸಿಯಾ) ಹಾಸನ ಜಿಲ್ಲಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಮೂಲದ ಆರ್.ಎನ್.ಎಸ್.ಪೇಂಟ್ಸ್ ಸಂಸ್ಥೆಯ ಮಾಲೀಕರಾಗಿರುವ ಎಂ.ಆರ್.ರಂಗಸ್ವಾಮಿ ಅವರು ಉದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯಮಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಸಂಘದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉದ್ಯಮಿಗಳ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಹಾಸನ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಜಿಲ್ಲೆಯ ಉದ್ಯಮ ವಲಯದಲ್ಲಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಂತಾಗಿದೆ.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆ, ಉದ್ಯಮಿಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಕೈಗಾರಿಕೆಗಳಿಗೆ ಸಂಬಂಧಿಸಿದ ಸರ್ಕಾರಿ ಸೌಲಭ್ಯ ಹಾಗೂ ಯೋಜನೆಗಳ ಕುರಿತು ಮಾಹಿತಿ ಒದಗಿಸುವುದು ಸೇರಿದಂತೆ ಉದ್ಯಮಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಜಿಲ್ಲಾ ಸಮಿತಿ ಕೆಲಸ ಮಾಡಬೇಕಿದೆ.
ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ರಂಗಸ್ವಾಮಿ ಅವರು ಸ್ಥಳೀಯ ಆಡಳಿತದಲ್ಲಿಯೂ ಅನುಭವ ಹೊಂದಿದ್ದು, ಇದೀಗ ಉದ್ಯಮ ಸಂಘಟನೆಯ ಜಿಲ್ಲಾ ಮಟ್ಟದ ಜವಾಬ್ದಾರಿ ವಹಿಸಿಕೊಂಡಿರುವುದು ಗಮನಾರ್ಹವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net