ಅತ್ಯಾಚಾರಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಕಾರಾಗೃಹ ಶಿಕ್ಷೆ
ಕಾರಾಗೃಹ ಶಿಕ್ಷೆ
Published on
ಬೆಳಗಾವಿ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ವೈ. ಗ್ರಾಮದ ದೇವರಾಜ ಅಶೋಕ ಮೇತ್ರಿ (28)ಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
2023ರಲ್ಲಿ ಅತ್ಯಾಚಾರವೆಸಗಿದ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಶ್ರೀಶೈಲ ಬ್ಯಾಕೂಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ತೀರ್ಪು ನೀಡಿದ್ದಾರೆ. ಸಂತ್ರಸ್ತತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net