ಗೃಹಲಕ್ಷ್ಮಿ, ಗೃಹಜ್ಯೋತಿಗೆ ಮರು ಅರ್ಜಿ | Karnataka Government

Karnataka Government > ಗೃಹಲಕ್ಷ್ಮಿ, ಗೃಹಜ್ಯೋತಿಗೆ ಮರು ಅರ್ಜಿ
Karnataka Government > ಗೃಹಲಕ್ಷ್ಮಿ, ಗೃಹಜ್ಯೋತಿಗೆ ಮರು ಅರ್ಜಿ
Published on
ಬೆಂಗಳೂರು: ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಮರು ಪರಿಷ್ಕರಣೆಗೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಈ ಎರಡೂ ಯೋಜನೆಗಳನ್ನು ಬಳಸಿಕೊಳ್ಳಲು ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಯೋಜನೆಗಳಲ್ಲಿನ ಅಕ್ರಮ ತಡೆಯಲು ಹೊಸದಾಗಿ ಸಲ್ಲಿಕೆ ಅನಿವಾರ್ಯ ಎಂದು ಶನಿವಾರ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸಿಎಂ ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳು ನಿಧನರಾಗಿದ್ದರೂ ಅವರ ಹೆಸರಿನಲ್ಲಿ ಬೇರೆಯವರು ಸುಮಾರು 100 ಕೋಟಿ ರೂ. ಗೂ ಹೆಚ್ಚು ಹಣ ಪಡೆದಿರುವುದು ಸರ್ಕಾರದ ಬಂದಿದೆ. ಗೃಹ ಯೋಜನೆಯಡಿ ವಿದ್ಯುತ್ತನ್ನು ಸ್ವಂತಕ್ಕಾಗಿ ಬಳಕೆ ಮಾಡಿಕೊಳ್ಳುವುದಕ್ಕೆ ತಕರಾರಿಲ್ಲ. ಒಬ್ಬರ ಹೆಸರಿನಲ್ಲಿ ಐದಾರು ಮೀಟರ್‌ಗಳು ಇರುವುದು ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಫಲಾನುಭವಿಗಳು ಅದೇ ಮನೆಯಲ್ಲಿ ವಾಸವಾಗಿದ್ದಾರಾ? ಈ ಯೋಜನೆ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯಾ? ಬೇರೆ ರಾಜ್ಯದವರು ಪಡೆದುಕೊಳ್ಳುತ್ತಿದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಯೋಜನೆಯ ಪರಿಷ್ಕರಣೆ ಮಾಡಲೇಬೇಕಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net