23ರಂದು ಕನ್ನಡ ಪುಸ್ತಕ ಓದಿ- ಬಹುಮಾನ ಗೆಲ್ಲಿ ಪರೀಕ್ಷೆ / DODDABALLAPUR

ದೊಡ್ಡಬಳ್ಳಾಪುರದ ಕನ್ನಡ ಜಾಗೃತ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುವೆಂಪು ಪುಸ್ತಕ ಬಿಡುಗಡೆ ಮಾಡುವ ಮೂಲಕ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಜಾಪ ಅಧ್ಯಕ್ಷ ಕೆ.ವೆಂಕಟೇಶ್​, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕಾರ್ಯಕಾರಿ ಸಮಿತಿಯ ಪರಮೇಶ್​, ಜಿ.ಸಿ.ಶಿವಕುಮಾರ್​, ಚಂದ್ರಣ್ಣ ಇದ್ದರು.
ದೊಡ್ಡಬಳ್ಳಾಪುರದ ಕನ್ನಡ ಜಾಗೃತ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುವೆಂಪು ಪುಸ್ತಕ ಬಿಡುಗಡೆ ಮಾಡುವ ಮೂಲಕ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಜಾಪ ಅಧ್ಯಕ್ಷ ಕೆ.ವೆಂಕಟೇಶ್​, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕಾರ್ಯಕಾರಿ ಸಮಿತಿಯ ಪರಮೇಶ್​, ಜಿ.ಸಿ.ಶಿವಕುಮಾರ್​, ಚಂದ್ರಣ್ಣ ಇದ್ದರು.
Published on
ದೊಡ್ಡಬಳ್ಳಾಪುರ: ಕನ್ನಡಿಗರಲ್ಲಿ ಕನ್ನಡ ಪುಸ್ತಕ ಪ್ರೀತಿ ಬೆಳೆಸಲು ನ.23 ರಂದು ದೊಡ್ಡಬಳ್ಳಾಪುರದ ಎಂಎಬಿಎಲ್​ ಪ್ರೌಢಶಾಲೆಯಲ್ಲಿ ಕನ್ನಡ ಪುಸ್ತಕ ಓದಿ- ಬಹುಮಾನ ಗೆಲ್ಲಿ ಎಂಬ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ವಿಜ್ಞಾನ ಸಾಹಿತಿ ಡಾ.ಎ.ಒ.ಆವಲಮೂರ್ತಿ ತಿಳಿಸಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ಎಂಬ ಮೂರು ವರ್ಗದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ತಾಲೂಕಿನ ವಿವಿಧ ಸಂಘಟನೆಗಳಿಂದ ನಡೆಸುತ್ತಿರುವ ಈ ಸ್ಪರ್ಧೆಯಲ್ಲಿ ಈ ವರ್ಷ "ಕುವೆಂಪು' ಅವರ ಪುಸ್ತಕ ಓದಿದ ನಂತರ ಪರೀಕ್ಷೆ ಬರೆದು ಬಹುಮಾನಗಳನ್ನು ಗೆಲ್ಲಬಹುದಾಗಿದೆ ಎಂದರು. ಪುಸ್ತಕಗಳು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿವೆ. ಅವು ಜ್ಞಾನ, ವಿವೇಕ ಮತ್ತು ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸುತ್ತವೆ. ಇಂದು ಡಿಜಿಟಲ್​ ಜಗತ್ತಿನಲ್ಲಿಯೂ ಪುಸ್ತಕಗಳ ಮಹತ್ವ ಕಡಿಮೆಯಾಗಿಲ್ಲ. ಪುಸ್ತಕಗಳು ಭಾಷಾ ಕೌಶಲ, ಸೃಜನಾತ್ಮಕತೆ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸುತ್ತವೆ ಎಂದರು.
ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕನ್ನಡ ಜಾಗೃತ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್​ನಿಂದ ಕಳೆದ ಮೂರು ದಶಕಗಳಿಂದ ನವೆಂಬರ್​ನಲ್ಲಿಸಾಹಿತ್ಯ, ವಿಜ್ಞಾನ, ಸಂಸತಿ ಸಮಾಗಮ ಉಪನ್ಯಾಸ ಮಾಲಿಕೆ ನಡೆಯುತ್ತಿದೆ ಎಂದರು. ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆಯುವ ಈ ಕಾರ್ಯಕ್ರಮ ನ.3 ರಂದು ದೊಡ್ಡಬಳ್ಳಾಪುರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಳ್ಳಲಿದೆ. 
ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಒ.ಆವಲಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್​ ಗೋಕಾಕ್​ ಚಳುವಳಿ ಕುರಿತು ಮತ್ತು ಖ್ಯಾತ ವೈದ್ಯೆ ಡಾ.ಇಂದಿರಾ ಅವರು ಹದಿಹರೆಯದ ಹೆಣ್ಣು ಮಕ್ಕಳ ಹಾಮೋರ್ನ್​ ಎಂಬ ವಿಷಯಗಳ ಕುರಿತು ಉಪನ್ಯಾಸ ನೀಡುವರು ಎಂದರು. ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್​ ಸ್ಕೌಟ್ಸ್​ ಮತ್ತು ಗೈಡ್​ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕಸಾಪ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್​ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net