ಕನ್ನಡಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧ

ಬೆಳಗಾವಿ ನಾಗನೂರು ರುದ್ರಾಕ್ಷಿಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿದರು. ಅಶೋಕ ಚಂದರಗಿ, ಮಹಾದೇವ ತಳವಾರ ಇತರರಿದ್ದರು.
ಬೆಳಗಾವಿ ನಾಗನೂರು ರುದ್ರಾಕ್ಷಿಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿದರು. ಅಶೋಕ ಚಂದರಗಿ, ಮಹಾದೇವ ತಳವಾರ ಇತರರಿದ್ದರು.
Published on
ಬೆಳಗಾವಿ: ಬೆಳಗಾವಿ ಮತ್ತು ಕನ್ನಡಕ್ಕಾಗಿ ಎಂತಹದೇ ಹೋರಾಟ ಬಂದರೂ ಅದಕ್ಕೆ ಬದ್ಧ. ಪ್ರಾಣತ್ಯಾಗಕ್ಕೂ ಸಿದ್ಧವಿರುವುದಾಗಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ
ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಪರ ಗೊತ್ತುವಳಿ ಮಂಡಿಸಲು ಒತ್ತಡ ಹಾಕುವುದು ಸೇರಿದಂತೆ ಗಡಿ, ನೆಲ ಮತ್ತು ಜಲದ ಕುರಿತಾಗಿ ತಮ್ಮ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನ್ನಡಪರ ಸಂಘಟಕರ ಸಭೆಯಲ್ಲಿ ಅವರು ಮಾತನಾಡಿದರು.
ಬೆಳಗಾವಿ ಕರ್ನಾಟಕದಲ್ಲೇ ಉಳಿಯಲು ಲಿಂಗೈಕ್ಯ ಶಿವಬಸವ ಸ್ವಾಮೀಜಿ ಮಾಡಿದ ಹೋರಾಟ ಮರೆಯಲಾಗದು. ಆದರೆ, ಇಷ್ಟು ವರ್ಷಗಳ ನಂತರವೂ ಮತ್ತೆ ಹೋರಾಟ ಮಾಡುವ ಪರಿಸ್ಥಿತಿ ಬಂದಿರುವುದು ದುರ್ದೈವದ ವಿಚಾರ ಎಂದು ವಿಷಾದಿಸಿದರು.
ಕನ್ನಡದ ಹಿತಾಸಕ್ತಿಗೆ ಧಕ್ಕೆ ಬಂದಾಗಲೆಲ್ಲ ಮಠವು ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತ ಬಂದಿದೆ. ಬೆಳಗಾವಿ ನಮ್ಮದು ಎಂದು ಸಾಬೀತುಪಡಿಸುವ ಪರಿಸ್ಥಿತಿ ಎದುರಾಗಿದ್ದು ದುರದೃಷ್ಟಕರ.
ಪಾಲಿಕೆಯಲ್ಲಿ ಕನ್ನಡಿಗರೇ ಅಧಿಕಾರದಲ್ಲಿದ್ದರೂ ಈ ಕುರಿತು ಠರಾವು ಪಾಸ್ ಮಾಡುವಲ್ಲಿ ಯಾಕೆ ಹಿಂದೇಟು ಹಾಕುತ್ತಿದ್ದಾರೆ? ಇದಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಮಠದ ಬೆಂಬಲವೂ ಇದೆ. ಈ ಕುರಿತು ಮಹಾಪೌರ ಹಾಗೂ ಉಪ ಮಹಾಪೌರರೊಂದಿಗೆ ಚರ್ಚಿಸುತ್ತೇನೆ
ಎಂದು ಭರವಸೆ ನೀಡಿದರು.
ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ, ಬಲರಾಮ ಮಾಸೇನಟ್ಟಿ, ವಾಜೀದ್ ಹಿರೇಕೋಡಿ, ಪಾಲಿಕೆ ಸದಸ್ಯರಾದ ರಮೇಶ ಸೊಂಟಕ್ಕಿ, ದಿನೇಶ ನಾಶಿಪುಡಿ, ಸಾಹಿತಿ ನೀಲಗಂಗಾ ಚರಂತಿಮಠ ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು ಸಭೆಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net