ಶಿಕ್ಷಣದಿಂದ ಕನಸುಗಳ ಸಾಕಾರ

ಶಿಕ್ಷಣದಿಂದ ಕನಸುಗಳ ಸಾಕಾರ
ಶಿಕ್ಷಣದಿಂದ ಕನಸುಗಳ ಸಾಕಾರ
Published on
ಬಂಗಾರಪೇಟೆ: ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಆಡಳಿತ, ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಎಸ್​.ಎನ್​.ನಾರಾಯಣಸ್ವಾಮಿ ಹೇಳಿದರು. education
ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಫೋಕಸ್​ ಸಂಸ್ಥೆ, ಅಕ್ಷರ ದಾಸೋಹ ನೌಕರರ ಸಂಘ ಮತ್ತು ಅಂಗನವಾಡಿ ನೌಕರರ ಸಂಘ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಸಬಲೀಕರಣವೇ ಸಮಾಜದ ಸಮಗ್ರ ಅಭಿವೃದ್ಧಿಗೆ ಕಾರಣ. ಮಹಿಳೆಯರು ಶಿಕ್ಷಣ ಕನಸು ಸಾಕಾರಗೊಳಿಸಬೇಕು ಎಂದು ಹೇಳಿದರು.
ಮಹಿಳೆಯರ ಗೌರವ ಮತ್ತು ಸುರಕ್ಷತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕುಟುಂಬ, ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರ ಒಟ್ಟಾಗಿ ಮಹಿಳೆಯರ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸಮಾನತೆ ಹಾಗೂ ಪ್ರಗತಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್​ ಸರ್ಕಾರ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಯೋಜನೆ ತಂದು ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ನೀಡುತ್ತಿದೆ. ದೇಶದಲ್ಲಿ ಮೊದಲನೇ ಬಾರಿಗೆ ಕಾಂಗ್ರೆಸ್​ ಸರ್ಕಾರ ಈ ಸಾಧನೆ ಮಾಡಿದೆ. ಇದರೊಂದಿಗೆ ಉಚಿತ ವಿದ್ಯುತ್​ ಹಾಗೂ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಕಲ್ಪಿಸಿದೆ ಎಂದರು.
ಬಿಸಿಯೂಟ ನೌಕರ ಸಂಘದ ಅಧ್ಯಕ್ಷ ರವಿಕುಮಾರ್​, ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್​, ಉಪಪ್ರಾಂಶುಪಾಲ ವಗ್ಗರ್​ ಹನುಮಂತ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net