ಪ್ರಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತೋರಿಸಿದ ಅಭಿಮಾನ, ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬೆಳೆದಿರುವ ಜಿಲ್ಲೆ. ಇಡೀ ದೇಶ ದಕ್ಷಿಣ ಕನ್ನಡದ ಇತಿಹಾಸ ಪರಂಪರೆಯನ್ನು ತಿಳಿದಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ನಾವು ಅಳಿಲು ಸೇವೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನಡೆಸಲಾಗಿದೆ. ಪಕ್ಷಭೇದ ಮರೆತು ಶಾಸಕರು, ಸಂಸದರು, ವಿಧಾನಪರಿಷತ್ತು ಸದಸ್ಯರೂ ಸೇರಿದಂತೆ ಸಲಹೆ ನೀಡಿ, ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.