ಭೋವಿ ವಡ್ಡರ್ ಎಂದೇ ನಮೂದಿಸಿ

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್. ತಂಗಡಗಿ
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್. ತಂಗಡಗಿ
Published on

ನಕಲಿ ಜಾತಿ ಪ್ರಮಾಣಪತ್ರ ತಡೆಯುವ ಉದ್ದೇಶದಿಂದ ಭೋವಿ ಸಮುದಾಯದವರಿಗೆ ಭೋವಿ ವಡ್ಡರ್ ಎಂದು ನಮೂದಿಸಿ ಸರ್ಟಿಫಿಕೇಟ್ ನೀಡುವಂತೆ

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್. ತಂಗಡಗಿ

ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆಯುವ ಮೂಲಕ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಸೌಲಭ್ಯ ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ, ಭೋವಿ ಸಮುದಾಯದವರಿಗೆ ಭೋವಿ ವಡ್ಡರ್ ಎಂದು ನಮೂದಿಸಿ ಜಾತಿ ಪ್ರಮಾಣಪತ್ರ ನೀಡಬೇಕಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಡುಪಿ ಸೇರಿ ದಕ್ಷಿಣ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಬೋಯಿ (ಬೆಸ್ತ) ಸಮುದಾಯದ ಕೆಲವರು ಮೀಸಲಾತಿ ಸೌಲಭ್ಯ ಪಡೆಯುವ ಉದ್ದೇಶದಿಂದ ಬೋಯಿ ಬದಲಿಗೆ ಬೋವಿ ಎಂದು ನಕಲಿ ಪ್ರಮಾಣಪತ್ರ ಪಡೆಯುತ್ತಿರುವುದು ಕಂಡು ಬಂದಿವೆ ಎಂದು ಸಮುದಾಯದ ಮುಖಂಡರು ಸಭೆಯ ಗಮನಕ್ಕೆ ತಂದರು.
ಎರಡೂ ಸಮುದಾಯಗಳ ಸಾಂಪ್ರದಾಯಿಕ ಕಸುಬು ಹಾಗೂ ಸಾಮಾಜಿಕ ಗುರುತಿನಲ್ಲಿರುವ ವ್ಯತ್ಯಾಸವನ್ನು ಪರಿಗಣಿಸಿ, ಭೋವಿ ಸಮುದಾಯಕ್ಕೆ ಭೋವಿ ವಡ್ಡರ್ ಎಂದು ಸ್ಪಷ್ಟವಾಗಿ ನಮೂದಿಸಿರುವ ಜಾತಿ ಪ್ರಮಾಣಪತ್ರ ನೀಡಬೇಕು. ಇದರಿಂದ ನಕಲಿ ಪ್ರಮಾಣಪತ್ರ ಪಡೆಯುವ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳಿಗೆ ತಂಗಡಗಿ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net