ಭಾರಿ ಮಳೆ ಹಿನ್ನೆಲೆ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್-Red alert for 3 districts

ಮುಂದಿನ 2 ದಿನ ಇನ್ನಷ್ಟು ಜೋರು ಮಳೆ
ಮುಂದಿನ 2 ದಿನ ಇನ್ನಷ್ಟು ಜೋರು ಮಳೆ
Published on

ಬೆಂಗಳೂರು: ಕರಾವಳಿ ಮತ್ತು ಮಲೆನಾಡಿನ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಮುಂದಿನ 2 ದಿನ ಇನ್ನಷ್ಟು ಜೋರಾಗಿ ಸುರಿಯಲಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆ.2ರಂದು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಕೊಡಲಾಗಿದೆ.ಈವೇಳೆ 204 ಮಿಮೀವರೆಗೆ ಮಳೆಯಾಗಬಹುದು. ಉಡುಪಿ, ಉತ್ತರ ಕನ್ನಡ, ಕೊಡಗು,ಹಾಸನದಲ್ಲಿ ಮುಂದಿನ 2 ದಿನ ಮತ್ತು ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಆ.2ರಂದು ಜೋರು ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸಮುದ್ರ ತೀರದ ಪ್ರದೇಶಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಹಾಗಾಗಿ, ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದೆ.
ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಇರಲಿದೆ.
ಬೆಂಗಳೂರಿನಲ್ಲಿ ಮುಂದಿನ ನಾಲ್ಕೈದು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಇದೇವೇಳೆ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಕೆಲವೆಡೆ ತುಂತುರು ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ. ದಾಖಲಾಗಬಹುದು ಎಂದು ಇಲಾಖೆ ಹೇಳಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net