ಕಸಾಪ ಅವ್ಯವಹಾರ ನ್ಯಾಯಾಂಗ ತನಿಖೆಗೆ ವಹಿಸಿ

ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸಾಹಿತ್ಯ ಪರಿಷತ್ತು
Published on

ಪ್ರಮುಖ ಮುಖ್ಯಾಂಶಗಳು

  • * ಸಿಎಸ್‌ಗೆ ರಾಜ್ಯಪಾಲ ಗೆಹಲೋತ್ ಪತ್ರ
ಬೆಂಗಳೂರು: ಡಾ. ಮಹೇಶ ಜೋಶಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯ ಅವ್ಯವಹಾರಗಳ ಕುರಿತ ತನಿಖೆಗೆ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗ ರಚಿಸುವ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಪತ್ರ ಬರೆದಿದ್ದಾರೆ. ರಾಜ್ಯಪಾಲರನ್ನು ಬುಧವಾರ ಭೇಟಿ ಮಾಡಿದ್ದ ಮಹೇಶ ಜೋಶಿ, ತಮ್ಮ ಮತ್ತು ಕಸಾಪ ವಿರುದ್ಧದ ವಿಚಾರಣೆಯಲ್ಲಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1960ರ ಸೆಕ್ಷನ್ 25ರ ಅಡಿಯಲ್ಲಿ ವಿಚಾರಣೆ ನಡೆಸುವ ವಿಚಾರಣಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರವು ರಾಜಕೀಯ ಪ್ರೇರಿತ ಮತ್ತು ಪ್ರಭಾವಿ ದೂರುದಾರರ ಒತ್ತಡದಿಂದಾಗಿ ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ವರದಿ ನೀಡುವ ಬಗ್ಗೆ ಅನುಮಾನವಿದೆ. ಹೀಗಾಗಿ ಡಾ.ಹಂಪ ನಾಗರಾಜಯ್ಯ ಪ್ರಕರಣದಲ್ಲಿ ಮಾಡಿದಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ವಿಚಾರಣಾ ಆಯೋಗ ರಚಿಸಿ ತನಿಖೆ ನಡೆಸಬೇಕೆಂದು ಕೋರಿದ್ದರು. ಅದರಂತೆ ನ್ಯಾಯಾಂಗ ತನಿಖೆಗೆ ವಿಚಾರಣಾ ಆಯೋಗ ರಚಿಸುವ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net