ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ರ ಅನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ 2025ರ ಏಪ್ರಿಲ್ 7ರಂದು ಜಾರಿಗೆ ಬಂದಿದೆ. ಈ ದಿನಾಂಕಕ್ಕೂ ಮೊದಲು ಸೃಜನೆಯಾಗಿರುವ ಕಟ್ಟಡ ಮತ್ತು ನಿವೇಶನಗಳನ್ನು ಗ್ರಾಪಂ ಸಮೀಕ್ಷೆ ಸಂದರ್ಭದಲ್ಲಿ ಕೈಬಿಟ್ಟಿದ್ದರಿಂದ ಆಸ್ತಿ ಮಾಲೀಕರಿಗೆ ತೊಂದರೆ ಉಂಟಾಗಿದೆ. ಆದ್ದರಿಂದ ಅಂಥವರು ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.