ಮಾಲಿನ್ಯಕಾರಕ ಕಾರ್ಖಾನೆಗಳಿಗೆ ಕಡಿವಾಣ ಹಾಕಿ

ಬೆಂಗಳೂರಿನಲ್ಲಿ ಬುಧವಾರ ಸಚಿವ ರಾಮಲಿಂಗರಡ್ಡಿ ಅವರಿಗೆ ಮಾಜಿ ಸಚಿವ ರಾಜಶೇಖರ ಪಾಟೀಲ್​, ಆನಂದರಾಜ ಪ್ರಭು  ಮನವಿ ಸಲ್ಲಿಸಿದರು. ಎಂಎಲ್​ಸಿಗಳಾದ ಡಾ.ಚಂದ್ರಶೇಖರ ಪಾಟೀಲ್​, ಭೀಮರಾವ ಪಾಟೀಲ್​, ಚಾರುದತ್ತ ಪ್ರಭು ಇದ್ದರು.
ಬೆಂಗಳೂರಿನಲ್ಲಿ ಬುಧವಾರ ಸಚಿವ ರಾಮಲಿಂಗರಡ್ಡಿ ಅವರಿಗೆ ಮಾಜಿ ಸಚಿವ ರಾಜಶೇಖರ ಪಾಟೀಲ್​, ಆನಂದರಾಜ ಪ್ರಭು ಮನವಿ ಸಲ್ಲಿಸಿದರು. ಎಂಎಲ್​ಸಿಗಳಾದ ಡಾ.ಚಂದ್ರಶೇಖರ ಪಾಟೀಲ್​, ಭೀಮರಾವ ಪಾಟೀಲ್​, ಚಾರುದತ್ತ ಪ್ರಭು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ರಾಜಶೇಖರ ಪಾಟೀಲ್​, ಆನಂದರಾಜ ಪ್ರಭು ಒತ್ತಾಯ
  • ಸಚಿವ ರಾಮಲಿಂಗರಡ್ಡಿಗೆ ಮನವಿ ಸಲ್ಲಿಕೆ
ಹುಮನಾಬಾದ್​: ಮಾಣಿಕನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ಹಾಗೂ ಜನರ ಆರೋಗ್ಯದ ಮೇಲಿನ ದುಷ್ಪರಿಣಾಮಕ್ಕೆ ಕಡಿವಾಣ ಹಾಕಲು ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಮಾಜಿ ಸಚಿವ ರಾಜಶೇಖರ ಪಾಟೀಲ್​, ಮಾಣಿಕಪ್ರಭು ಸಂಸ್ಥಾನದ ಕಾರ್ಯದರ್ಶಿ ಆನಂದರಾಜ ಪ್ರಭು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗರಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಸಮಸ್ಯೆ ಗಂಭೀರತೆ ಬಗ್ಗೆ ಮನವರಿಕೆ ಮಾಡಿ, ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿ ಪರಿಸರಕ್ಕೆ ಹಾನಿ ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸರ್ಕಾರ ಕೂಡಲೇ ಮಧ್ಯೆಪ್ರವೇಶಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಸಚಿವ ರಾಮಲಿಂಗ ರಡ್ಡಿ ಮಾತನಾಡಿ, ಹುಮನಾಬಾದ್​ ತಾಲೂಕಿನಲ್ಲಿ ರಾಸಾಯನಿಕ ಕಾರ್ಖಾನೆಗಳಿಂದ ಪರಿಸರಕ್ಕೆ ಹಾಗೂ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್​ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್​, ಭೀಮರಾವ ಪಾಟೀಲ್​, ಪ್ರಮುಖರಾದ ಚಾರುದತ್ತ ಪ್ರಭು, ಸಾಗರ ನಿಮ್ಮಾಣೆ, ಶಿವರಾಯಪ್ಪ ಪಟಪಳ್ಳಿ, ಸಾಯಿಪ್ರಸಾದ ತಿವಾರಿ, ವೀರಣ್ಣ ನಿಟ್ಟೂರೆ, ಗಣೇಶ ಮೇತ್ರೆ, ದತ್ತಾತ್ರೇಯ ಗರುಡಕರ್​, ದಿನೇಶ ಆರ್ಯ, ಆನಂದ ಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net