ಹಳೇ ಪಿಂಚಣಿ ಮರು ಜಾರಿಗೊಳಿಸಿ

ಬೀದರ್​ನಲ್ಲಿ ಶನಿವಾರ ಆಯೋಜಿಸಿದ್ದ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ವಿಜಯಕುಮಾರ ಪಾಟೀಲ್​ ಯರನಳ್ಳಿ ದಂಪತಿ ಹಾಗೂ ತಾಯಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಸಂದೀಪ್​ ಬೂದಿಹಾಳ, ಬಾಬು ವಾಲಿ, ಜೈರಾಜ್​ ಖಂಡ್ರೆ, ಶಶಿಧರ ಹೊಸಳ್ಳಿ, ಸುರೇಶ ಚನಶೆಟ್ಟಿ, ಪರಮೇಶ್ವರ ಬಿರಾದಾರ್​ ಇತರರಿದ್ದರು.
ಬೀದರ್​ನಲ್ಲಿ ಶನಿವಾರ ಆಯೋಜಿಸಿದ್ದ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ವಿಜಯಕುಮಾರ ಪಾಟೀಲ್​ ಯರನಳ್ಳಿ ದಂಪತಿ ಹಾಗೂ ತಾಯಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಸಂದೀಪ್​ ಬೂದಿಹಾಳ, ಬಾಬು ವಾಲಿ, ಜೈರಾಜ್​ ಖಂಡ್ರೆ, ಶಶಿಧರ ಹೊಸಳ್ಳಿ, ಸುರೇಶ ಚನಶೆಟ್ಟಿ, ಪರಮೇಶ್ವರ ಬಿರಾದಾರ್​ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಬೆಲ್ದಾಳೆ ಹೇಳಿಕೆ ಒತ್ತಾಯ
  • ಬೀದರ್​ನಲ್ಲಿ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ
ಬೀದರ್​ : ರಾಜ್ಯ ಸರ್ಕಾರ ಶಿಕ್ಷಕರಿಗೆ ಹಳೆಯ ಪಿಂಚಣಿ ಯೋಜನೆಯನ್ನೇ ಮರು ಜಾರಿಗೊಳಿಸಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದರು.
ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಬೀದರ್​ ಉತ್ತರ ಘಟಕದಿಂದ ಶನಿವಾರ ಆಯೋಜಿಸಿದ್ದ ಬೀದರ್​ ತಾಲೂಕು ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹಳೆಯ ಪಿಂಚಣಿ ಯೋಜನೆ ಜಾರಿ ಸಂಬಂಧ ಅಧಿವೇಶನದಲ್ಲಿ ಧ್ವನಿ ಎತ್ತುವೆ ಎಂದರು.
ಕರ್ನಾಟಕ ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂದೀಪ್​ ಬೂದಿಹಾಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಕುರಿತು ಚಿಂತನ- ಮಂಥನಕ್ಕೆ ವೇದಿಕೆ ಕಲ್ಪಿಸುವ ಶೈಕ್ಷಣಿಕ ಕನ್ನಡ ಸಾಹಿತ್ಯ ಸಮ್ಮೇಳನಗಳು ರಾಜ್ಯದ ಎಲ್ಲೆಡೆ ನಡೆಯುವಂತಾಗಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯ ಹಿಂದಿಗಿಂತಲೂ ಈಗ ಹೆಚ್ಚು ಆಗಬೇಕಾಗಿದೆ ಎಂದು ಹೇಳಿದರು.
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ನಮ್ಮ ಸಾಧನೆಗಳೇ ಮಾತಾಡಬೇಕು. ವಿಜಯಕುಮಾರ ಪಾಟೀಲ್​ ಕನ್ನಡ ಹೋರಾಟಗಾರರು. ಅವರ ಬದುಕು ಎಲ್ಲರಿಗೂ ಪ್ರೇರಣೆ. ಬೆಂಗಳೂರಿನಲ್ಲಿ ಹೋರಾಟ ನಡೆಸಿ, ಸಾವಿರಾರು ಕನ್ನಡ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಟ್ಟ ಶ್ರೇಯ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಸಮ್ಮೇಳನ ಸರ್ವಾಧ್ಯಕ್ಷ ವಿಜಯಕುಮಾರ ಪಾಟೀಲ್​ ಯರನಳ್ಳಿ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಬಸವರಾಜ ಧನ್ನೂರ, ಡಾ. ಚನ್ನಬಸವ ಪಟ್ಟದ್ದೇವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೈರಾಜ್​ ಖಂಡ್ರೆ ಮಾತನಾಡಿದರು.
ಪರಿಷತ್​ ಬೀದರ್​ ಉತ್ತರ ಘಟಕದ ಅಧ್ಯಕ್ಷ ಪರಮೇಶ್ವರ್​ ಬಿರಾದಾರ್​ ಪ್ರಾಸ್ತಾವಿಕ ಮಾತನಾಡಿದರು.
ಹೆಡಗಾಪುರದ ಶ್ರೀ ನೇತೃತ್ವ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಪರಿಷತ್​ ಜಿಲ್ಲಾ ಘಟಕದ ಖಜಾಂಚಿ ಶಿವಶಂಕರ ಟೋಕರೆ, ಪ್ರಮುಖರಾದ ಸೋಮಶೇಖರ ಬಿರಾದಾರ್​, ಶಶಿಧರ ಹೊಸಳ್ಳಿ, ಚಂದ್ರಶೇಖರ ಪಾಟೀಲ್​ ಕಲಬುರಗಿ, ರವೀಂದ್ರರಡ್ಡಿ ಮಾಲಿಪಾಟೀಲ, ಶೇಕ್​ ಮಹೆಬೂಬ್​ ಪಟೇಲ್​, ಡಾ. ಸಚಿನ್​ ವಿ. ಪಾಟೀಲ್​, ಸುಮಿತ್​ ಮದನೂರೆ, ದಿಗಂಬರ್​ ಮಡಿವಾಳ, ಮಾರುತಿ ಬೌದ್ಧೆ ಇತರರಿದ್ದರು.
ಸಂತೋಷ ಮಂಗಳೂರೆ ಸ್ವಾಗತಿಸಿದರು. ಲಕ್ಷ$್ಮಣ ಪೂಜಾರಿ ನಿರೂಪಣೆ ಮಾಡಿದರು. ಸಂಗಮೇಶ ನೇಳಗೆ ವಂದಿಸಿದರು.
ಬಾಕ್ಸ್​
ಸಮ್ಮೇಳನಾಧ್ಯಕ್ಷರ ಅದ್ದೂರಿ ಮೆರವಣಿಗೆ
ಶೈಕ್ಷಣಿಕ ಸಾಹಿತ್ಯ ಸಮ್ಮೇಳನ ನಿಮಿತ್ತ ನಗರದಲ್ಲಿ ಶನಿವಾರ ಅಲಂಕೃತ ಸಾರೋಟಿನಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ವಿಜಯಕುಮಾರ ಪಾಟೀಲ್​ ಯರನಳ್ಳಿ ಹಾಗೂ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಯಿತು.
ಬಿವಿಬಿ ಕಾಲೇಜಿನಿಂದ ಆರಂಭವಾದ ಮೆರವಣಿಗೆ ವಿವಿಧ ವೃತ್ತದ ಮೂಲಕ ಹಾಯ್ದು ರಂಗಮಂದಿರಕ್ಕೆ ತಲುಪಿ ಸಮಾರೋಪಗೊಂಡಿತು. ವಿದ್ಯಾರ್ಥಿಗಳು ಕೈಯಲ್ಲಿ ಕನ್ನಡ ಧ್ವಜ ಹಿಡಿದು ಹೆಜ್ಜೆ ಹಾಕಿದರು. ಲಂಬಾಣಿ ನೃತ್ಯ, ಕುದುರೆ ಮೇಲೆ, ವಾಹನಗಳಲ್ಲಿ ಕುಳಿತಿದ್ದ ಬಸವಣ್ಣ ಹಾಗೂ ಇತರ ಶರಣರ ಪಾತ್ರಧಾರಿಗಳು ಗಮನ ಸೆಳೆದರು. ಡಿಜೆದಲ್ಲಿ ಮೊಳಗಿದ ಕನ್ನಡ ಗೀತೆಗಳ ತಾಳಕ್ಕೆ ತಕ್ಕಂತೆ ಯುವಕರು ಕುಣಿದು ಕುಪ್ಪಳಿಸಿದರು. ಹೈಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್​ ವಾಲಿ ಮೆರವಣಿಗೆಗೆ ಚಾಲನೆ ನೀಡಿದರು.
"

ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಸರ್ಕಾರ ಕನ್ನಡ ಶಾಲೆಗಳ ಉಳಿವಿಗೆ ವಿಶೇಷ ಕಾಳಜಿ ತೋರಬೇಕು. ಕನ್ನಡ ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು

— > ಬಾಬು ವಾಲಿ ಬಿಡಿಎ ಮಾಜಿ ಅಧ್ಯಕ್ಷ



ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net