400 ಕೋಟಿ ರೂ. ವೆಚ್ಚದಲ್ಲಿ ಉರ್ದು ಶಾಲೆಗಳಿಗೆ ಕಾಯಕಲ್ಪ: ಸಿಎಂ ಸಿದ್ದರಾಮಯ್ಯ | Karnataka Budget 2026-27

 Karnataka Budget 2026-27
Karnataka Budget 2026-27
Published on
Karnataka Budget 2026-27: ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ವೇಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್‌ನಲ್ಲಿ ಭರ್ಜರಿ ಯೋಜನೆಗಳನ್ನು ಘೋಷಿಸಿದ್ದು, ಕೇವಲ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಷ್ಟೇ ಸೀಮಿತವಾಗದೆ, ಸಮುದಾಯದ ಯುವಜನತೆಯ ಶಿಕ್ಷಣ ಮತ್ತು ಉದ್ಯೋಗದತ್ತ ಸರ್ಕಾರ ಈ ಬಾರಿ ಹೆಚ್ಚಿನ ಒತ್ತು ನೀಡಿದೆ.

ಅಲ್ಪಸಂಖ್ಯಾತರ ಅಭಿವೃದ್ದಿಗೆ ಬಜೆಟ್​ನಲ್ಲಿ ಸಿಎಂ ಘೋಷಿಸಿದ ಪ್ರಮುಖ ಯೋಜನೆಗಳು

  • 25 ಹೊಸ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಪ್ರಾರಂಭ.
  • CBSE ಪಠ್ಯಕ್ರಮದಡಿ 10 ಕೋಟಿ ರೂ. ಅನುದಾನದಲ್ಲಿ 10 ಹೊಸ ಸಂತ ಶಿಶುನಾಳ ಶರೀಫ ವಸತಿ ಶಾಲೆಗಳ ಪ್ರಾರಂಭ.
  • 25 ಹೊಸ ಸಂತ ಶಿಶುನಾಳ ಶರೀಫರ ವಸತಿ ಶಾಲೆಗಳ ಪ್ರಾರಂಭ.
  • 100 ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಉರ್ದು ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಪಿ.ಎಸ್.‌ ಮಾದರಿಯಲ್ಲಿ ಉನ್ನತೀಕರಣ.
  • 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರಾರಂಭ. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಪ್ರಾರಂಭ.
  • ಅಲ್ಪಸಂಖ್ಯಾತರ ನಾಲ್ಕು ವಸತಿ ಶಾಲೆಗಳನ್ನು K-CET/JEE/NEET ಪರೀಕ್ಷೆಗಳಿಗೆ Center for Excellenceನ್ನಾಗಿ ಸ್ಥಾಪನೆ.
  • 20 ವಸತಿ ಶಾಲೆಗಳ ಮಕ್ಕಳಿಗೆ K-CET/JEE/NEET ಪರೀಕ್ಷೆಗಳಿಗೆ ವಿಶೇಷ ತರಬೇತಿ.
  • ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರೀಕ ಸೇವಾ ಕೇಂದ್ರಗಳ ಪ್ರಾರಂಭ.
  • ಬೆಂಗಳೂರಿನಲ್ಲಿ 100 ಸಂಖ್ಯಾಬಲದ ನಾಲ್ಕು ಉದ್ಯೋಗಸ್ಥ ಮಹಿಳೆಯರ ವಸತಿನಿಲಯಗಳ ಪ್ರಾರಂಭ.ಜೈನ್‌, ಬೌದ್ಧ ಮತ್ತು ಸಿಖ್‌ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
  • ಅಲ್ಪಸಂಖ್ಯಾತರ 5,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿಗೆ ತಲಾ 50,000 ರೂ.
  • ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ತಲಾ 50 ಲಕ್ಷ ರೂ.ಗಳ ನೆರವಿನೊಂದಿಗೆ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳ ಸ್ಥಾಪನೆ.
  • ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರೆ ಸಮಾಜ ಸುಧಾರಕರ ಕೃತಿಗಳು ಮತ್ತು ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ.
  • ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್‌ ಭವನಗಳ ನಿರ್ಮಾಣ.31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಣ. ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜು ಪ್ರಾರಂಭ.
  • ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ವಕ್ಫ್‌ ಆಸ್ತಿಗಳ ಸಮಗ್ರ ಅಭಿವೃದ್ಧಿ.
  • ಬೀದರ್‌ನ ಶ್ರೀ ನಾನಕ್‌ ಝೀರಾ ಸಾಹೇಬ್‌ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆ.

ಸಿಎಂ ದಾಖಲೆ ಬಜೆಟ್​

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ (2026-27 ಸಾಲಿನ ರಾಜ್ಯ ಆಯವ್ಯಯ) ಕರ್ನಾಟಕ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಏಕೆಂದರೆ, ಯಾವುದೇ ಮುಖ್ಯಮಂತ್ರಿ ಇಷ್ಟೊಂದು ಬಾರಿ ಬಜೆಟ್ ಮಂಡಿಸಿಲ್ಲ. ಸುಮಾರು 4.48 ಲಕ್ಷ ಕೋಟಿ ಗಾತ್ರದ ಈ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ) ಮುಖ್ಯ ಆದ್ಯತೆ ನೀಡಲಾಗಿದ್ದು, ಆದಾಯ ಕೊರತೆ, ಜಿಎಸ್‌ಟಿ ಸುಧಾರಣೆಯಿಂದ ಉಂಟಾದ ನಷ್ಟ ಮತ್ತು ಹೆಚ್ಚುತ್ತಿರುವ ಖರ್ಚುಗಳ ನಡುವೆಯೂ ಮಹಿಳೆಯರು, ರೈತರು, ಯುವಕರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ (ವಿಶೇಷವಾಗಿ ಬೆಂಗಳೂರು ಮತ್ತು ಹಿಂದುಳಿದ ಪ್ರದೇಶಗಳು) ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net