ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಮಾತನಾಡಿ, 37 ಸಾವಿರ ಕೋಟಿ ರೂ. ಬಾಕಿ ಬಿಲ್ ಬಿಡುಗಡೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಮಾರ್ಚ್‌ನಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್, ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಬೋಸರಾಜು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ, ಬಾಕಿ ಬಿಲ್‌ಗಳಿಗೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಪಿಡಬ್ಲ್ಯುಡಿ ವ್ಯಾಪ್ತಿಯ ಬಿಲ್‌ಗಳಿಗೆ ಒಟ್ಟು 2,300 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.