ಪ್ರಮಾಣಪತ್ರ ವಿತರಣೆ ಕಾರ್ಯದಿಂದ ಮುಕ್ತಗೊಳಿಸಿ

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
Published on

ಬೆಳಗಾವಿ:

ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳ ವಿತರಣಾ ಕಾರ್ಯಕ್ಕೆ ನಿಯೋಜಿಸಿರುವುದನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು.

ಆರೋಗ್ಯ ಇಲಾಖೆಯಡಿ ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು, ಮಕ್ಕಳ ಲಸಿಕಾ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹೀಗೆ ವಿವಿಧ ಆರೋಗ್ಯ ಸೇವೆಗಳನ್ನು ಜನರಿಗೆ ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಇದೀಗ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳನ್ನು ಮನೆಮನೆಗೆ ವಿತರಿಸುವ ಕಾರ್ಯಕ್ಕೆ ನಿಯೋಜಿಸಲಾಗಿದೆ ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳ ಮನೆಮನೆಗೆ ವಿತರಣಾ ಕಾರ್ಯಕ್ಕೆ ನಿಯೋಜನೆ ಮಾಡಿದರೆ ಸೂಕ್ತ ಸಂಭಾವನೆ, ಪ್ರಯಾಣ ಭತ್ಯೆ, ಸ್ಮಾರ್ಟ್‌ೆನ್, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು.
ಬೇರೆ ಕೆಲಸಗಳ ಜವಾಬ್ದಾರಿಯಿಂದ ವಿನಾಯಿತಿ ಕಲ್ಪಿಸಬೇಕು ಎಂದು ವಿನಂತಿಸಿದರು. ಗೀತಾ ರಾಯವಗೋಳ, ರೂಪಾ ಅಂಗಡಿ, ಸುಮಿತ್ರಾ ತಿಮ್ಮಾಪೂರಮಠ, ಜಯಶ್ರೀ ನಾವಿ ಹಾಗೂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net