ಮಠಗಳಿಂದ ಉಳಿದಿದೆ ಧಾರ್ಮಿಕ, ಸಂಸತಿ ಪರಂಪರೆ

Religious and parliamentary heritage left behind by monasteries
Religious and parliamentary heritage left behind by monasteries
Published on
ಪಟ್ಟನಾಯಕನಹಳ್ಳಿ: ದೇವತಾ ಉತ್ಸವಗಳು ಜನಸಾಮಾನ್ಯರ ಸಂಬಂಧ ಗಟ್ಟಿಗೊಳಿಸುವಲ್ಲಿ ಸಹಕಾರಿ ಆಗುತ್ತವೆ. ನಮ್ಮ ಧಾರ್ಮಿಕ, ಸಂಸತಿ ಪರಂಪರೆ ಉಳಿಸಿ ಬೆಳೆಸುವಲ್ಲಿ ಮಠಗಳ ಪಾತ್ರ ಮಹತ್ವದಾಗಿದೆ ಎಂದು ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಕಳಸ ಪ್ರತಿಷ್ಠಾಪನ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿ ವರ್ಷದಂತೆ ಶ್ರೀ ಓಂಕಾರೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಧಾರ್ಮಿಕ ವಿಧಿ ವಿಧಾನದಂತೆ ಶನಿವಾರ ಆರಂಭವಾಗಿದ್ದು, ಜ.15ರವರಿಗೆ ನಡೆಯಲಿದೆ. ಶನಿವಾರ ಓಂಕಾರೇಶ್ವರಸ್ವಾಮಿ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಾಡುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಜಾತ್ರಾ ಮಹೋತ್ಸವದಲ್ಲಿ ತೇರು ಹೇಗೆ ಸರಾಗವಾಗಿ ಹರಿಯುವುದು ಅದೇ ರೀತಿ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿರುವ ಕಷ್ಟ ಕಾರ್ಪಣ್ಯಗಳು ದೂರವಾಗಿ ಒಳ್ಳೆಯ ದಿನಗಳು ಲಭಿಸಲಿ. ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸಿದರೆ, ತಮಗೂ ಕೂಡ ಭಗವಂತ ಒಳ್ಳೆಯದನ್ನೇ ಕಳುಹಿಸಲಿದ್ದಾನೆ ಎಂದರು.
ಜ.9ರಂದು ರಾಜ್ಯದ ಪ್ರಸಿದ್ಧ ಐತಿಹಾಸಿಕ ಪ್ರಸಿದ್ಧ ಓಂಕಾರೇಶ್ವರಸ್ವಾಮಿ ಕಲ್ಲುಗಾಲಿ ರಥೋತ್ಸವ ವಿಜೃಂಭಣೆಯಿಂದ ನೆರವೇರಲಿದ್ದು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳ ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ನೂತನ ತಂತ್ರಾನ ಆಧಾರಿತ ಕೃಷಿ ಚಟುವಟಿಕೆಯಲ್ಲಿ ರೈತ ತೊಡಗಿಸಿಕೊಳ್ಳಬೇಕು ಎಂಬ ದೂರ ದೃಷ್ಟಿ ಪರಿಕಲ್ಪನೆಯೊಂದಿಗೆ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಪ್ರಾತ್ಯಕೆ ಬೆಳೆಯ ಮೂಲಕ ಕಡಿಮೆ ನೀರು ಮತ್ತು ಕಡಿಮೆ ಖರ್ಚು ಪ್ರಮಾಣದಲ್ಲಿ ಕೈಗೊಳ್ಳುವ ಕೃಷಿಗಳ ಬಗ್ಗೆ ಸಮಗ್ರ ಮಾಹಿತಿಯ ಕೃಷಿ ಪ್ರದರ್ಶನವನ್ನು ಮಠ ಕಳೆದ 25 ವರ್ಷದಿಂದ ಏರ್ಪಡಿಸುತ್ತಿದೆ. ಇದೇ ಸಂದರ್ಭದಲ್ಲಿ ಕಲ್ಲುಗಾಲಿ ರಥೋತ್ಸವಕ್ಕೆ ಕಳಸ ಪ್ರತಿಷ್ಠಾಪನೆ ಮಾಡಲಾಯಿತು.
ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ತಮ್ಮಣ್ಣ, ಮಹೇಶ್​, ನಿರಂಜನ್​, ನಾದೂರು ಗ್ರಾಪಂ ಸದಸ್ಯರಾದ ವಿಜಯಕುಮಾರ್​, ಮಂಜುನಾಥಸ್ವಾಮಿ, ಗಿರೀಶ್​, ಹನುಮಂತರಾಯಪ್ಪ, ಮೆಡಿಕಲ್​ ಉಮೇಶ್​ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net